
ಮಂಗಳೂರು: ಸುರತ್ಕಲ್ ಟೋಲ್ ಗೇಟ್ ತೆರವು: ನಳಿನ್ ಟ್ವೀಟ್
Monday, November 14, 2022
ಮಂಗಳೂರು: ನಗರದ ಸುರತ್ಕಲ್ ಟೋಲ್ ಗೇಟ್ ಅನ್ನು ರದ್ದು ಪಡಿಸಲಾಗಿದೆ ಎಂದು ಸಂಸದ ನಳಿನ್ ಕುಮಾರ್ ಕಟೀಲು ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ. ಈ ಮೂಲಕ ಬಹು ವಿವಾದಿತವಾದ ಸುರತ್ಕಲ್ ಟೋಲ್ ಗೇಟ್ ಗೆ ಕೊನೆಗೂ ಮುಕ್ತಿ ದೊರೆತಂತಾಗಿದೆ.
60 ಕಿ.ಮೀ. ವ್ಯಾಪ್ತಿಯಲ್ಲಿ ಇರುವ ನಾಲ್ಕು ಟೋಲ್ ಗೇಟ್ ಗಳಿದೆ. ಈ ಹಿನ್ನೆಲೆಯಲ್ಲಿ ಸುರತ್ಕಲ್ ಟೋಲ್ ಗೇಟ್ ತೆರವು ಮಾಡಬೇಕೆಂದು ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿ ಕಳೆದ 17 ದಿನಗಳಿಂದ ಸುರತ್ಕಲ್ ಟೋಲ್ ಗೇಟ್ ಬಳಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದೆ. ಪ್ರತಿಭಟನಾಕಾರರ ಒತ್ತಡಕ್ಕೆ ಮಣಿದ ಕೇಂದ್ರ ಸರಕಾರ ಟೋಲ್ ಗೇಟ್ ಅನ್ನು ತೆರವು ಮಾಡಿದೆ.
ತಾಂತ್ರಿಕ ಅಂಶಗಳ ಕಾರಣ ಟೋಲ್ ರದ್ದು ತಡವಾಗಿದೆ. ಇದೀಗ ಟೋಲ್ ತೆರವಿನ ತಾಂತ್ರಿಕ ಅಂಶ ಪೂರ್ಣವಾಗಿದೆ. ನಮ್ಮ ಮನವಿಗೆ ಸೂಕ್ತವಾಗಿ ಸ್ಪಂದಿಸಿದ ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಪ್ರಧಾನಿ ನರೇಂದ್ರ ಮೋದಿಯವರಿಗೆ ನಾಗರಿಕರ ಪರವಾಗಿ ಧನ್ಯವಾದಗಳು ಎಂದು ನಳಿನ್ ಕುಮಾರ್ ಕಟೀಲು ಟ್ವೀಟ್ ಮಾಡಿದ್ದಾರೆ.