ನಾಗದೋಷವಿದೆ ಎಂದು ನಂಬಿಸಿ ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ: ಅಪರಾಧಿಗೆ 10 ವರ್ಷ ಕಠಿಣ ಶಿಕ್ಷೆ, 10 ಸಾವಿರ ರೂ.ದಂಡ
Sunday, January 29, 2023
ಬೆಂಗಳೂರು: ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗೆ ಎಫ್‌ಟಿಎಸ್‌ಸಿ ನ್ಯಾಯಾಲಯ 10 ವರ್ಷ ಕಠಿಣ ಶಿಕ್ಷೆ ಮತ್ತು 10 ಸಾವಿರ ರೂ.ದಂಡ ವಿಧಿಸಿ ಆದೇಶಿಸಿದೆ.
ಮಂಜುನಾಥ್ ರಾವ್ ಶಿಕ್ಷೆಕೊಳಗಾಗಿರುವ ಅಪರಾಧಿ.
ಈತ ಬೆಂಗಳೂರಿನ ಸಿಂಗಸಂದ್ರದಲ್ಲಿ ಮೆಡಿಕಲ್ ಗ್ಯಾಸ್ ಸಿಲಿಂಡರ್ ವ್ಯಾಪಾರ ಮಾಡಿಕೊಂಡಿದ್ದ. ಜೊತೆಗೆ ಅದೇ ಅಂಗಡಿಯಲ್ಲಿ ದೇವರ ಫೋಟೋಗಳನ್ನು ಇಟ್ಟುಕೊಂಡು ಅಂಗಡಿಗೆ ಬರುವ ಮಹಿಳೆಯರಿಗೆ ಧೂಪ ಸುತ್ತಿ ಪ್ರಸಾದ ಕೊಡುತ್ತಿದ್ದ. 2021 ರ ಜುಲೈ 7ರ ಬೆಳಗ್ಗೆ 11ಕ್ಕೆ ಲಲಿತಮ್ಮ ಎಂಬಾಕೆ ತಮ್ಮ ಪುತ್ರಿಯೊಂಯ ಆರೋಪಿಯ ಅಂಗಡಿಗೆ ಬಂದಿದ್ದಾರೆ. ಈ ವೇಳೆ ಆರೋಪಿ ನಿಮಗೆ ನಾಗದೋಷವಿದೆ. ಪರಿಹಾರ ಮಾಡಲು ಪೂಜಾ ಸಾಮಗ್ರಿ ತೆಗೆದುಕೊಂಡು ಬನ್ನಿ ಎಂದು ಹೊರಗೆ ಕಳುಹಿಸಿದ್ದಾನೆ. ಈ ವೇಳೆ ಅಂಗಡಿಯಲ್ಲಿ ಒಬ್ಬಳೇ ಇದ್ದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ.
ಈ ಬಗ್ಗೆ ಪರಪ್ಪನ ಅಗ್ರಹಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿ ಎಸ್.ಸಂದೀಪ್ ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡ ಪ್ರಕರಣ ವಿಚಾರಣೆ ಕೈಗೆತ್ತಿಕೊಂಡ ಎಫ್‌ಟಿಎಸ್‌ಸಿ ನ್ಯಾಯಾಲಯದ ನ್ಯಾಯಾಧೀಶ ಇಷ್ರತ್ ಜಹಾನ್ ಅಪರಾಧಿಗೆ 10 ವರ್ಷಗಳ ಕಠಿಣ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿ ಆದೇಶಿಸಿದ್ದಾರೆ. ಬಾಲಕಿಯ ಪರವಾಗಿ ಸರ್ಕಾರಿ ಅಭಿಯೋಜಕಿ ಗೀತಾ ಗೊರವರ ವಾದ ಮಂಡಿಸಿದ್ದರು.