ಜ.22- ಮಂಗಳೂರಿನಲ್ಲಿ ಕಾಂಗ್ರೆಸ್ ನಿಂದ ಪ್ರಜಾಧ್ವನಿಯಾತ್ರೆ, ಸಮಾವೇಶ
ಮಂಗಳೂರು: ಬೆಳಗಾವಿಯಲ್ಲಿ ಪ್ರಾರಂಭವಾಗಿರುವ ಪ್ರಜಾಧ್ವನಿ ಯಾತ್ರೆಯು ಜ. 22ರಂದು ಮಂಗಳೂರಿಗೆ ಆಗಮಿಸಲಿದ್ದು ಕರಾವಳಿ ಉತ್ಸವ ಮೈದಾನದಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರ ಸಮಕ್ಷಮದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರೀಶ್ ಕುಮಾರ್ ತಿಳಿಸಿದರು.
ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಉಡುಪಿಯಲ್ಲಿ ಬೆಳಗ್ಗೆ ಪ್ರಜಾಧ್ವನಿ ಕಾರ್ಯಕ್ರಮ ನಡೆಯಲಿದೆ. ಬಳಿಕ ಅಲ್ಲಿಂದ ಬಸ್‌ನಲ್ಲಿ ಕಾಂಗ್ರೆಸ್ ಹಿರಿಯ ಮುಖಂಡರು ಮಂಗಳೂರಿಗೆ ಆಗಮಿಸಲಿದ್ದು, ಅವರನ್ನು ಭರ್ಜರಿ ಸ್ವಾಗತದೊಂದಿಗೆ ಕರೆತರಲಾಗುವುದು ಎಂದರು.
ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಮುಖಂಡರಾದ ರೋಜಿ ಜಾನ್, ಎಂ.ಬಿ. ಪಾಟೀಲ್, ಬಂಗಾರಪ್ಪ, ಧ್ರುವ ನಾರಾಯಣ್,ಎಚ್.ಕೆ. ಪಾಟೀಲ್ ಮೊದಲಾದವರು ಪಾಲ್ಗೊಳ್ಳಲಿದ್ದಾರೆ. ಸುಮಾರು 25ರಿಂದ 30 ಸಾವಿರ ಕಾರ್ಯಕರ್ತರು ಭಾಗವಹಿಸುವರು ಎಂದು ತಿಳಿಸಿದ್ದಾರೆ
ಜಿಎಸ್‌ಟಿಯಲ್ಲಿ ಕೇಂದ್ರ ವಂಚನೆ: ಜಿಎಸ್ ಟಿಯಲ್ಲಿ ರಾಜ್ಯಕ್ಕೆ ಬರಬೇಕಾದ ಪಾಲನ್ನು ಕೊಡದೆ ಕೇಂದ್ರ ವಂಚಿಸಿದೆ, ರಾಜ್ಯ ಸರಕಾರ ಕೃಷಿಕರನ್ನು ಬೀದಿಗೆ ತಂದು
ನಿಲ್ಲಿಸಿದೆ. ಯಾವುದೇ ಯೋಜನೆಗಳನ್ನು ಜಾರಿಗೆ ತರುತ್ತಿಲ್ಲ, ಡಬಲ್ ಎಂಜಿನ್ ಸರಕಾರದ ವೈಫಲ್ಯಗಳನ್ನು ಜನರ ಮುಂದೆ ಬಯಲುಗೊಳಿಸುವುದಕ್ಕಾಗಿ ಪ್ರಜಾಧ್ವನಿ ಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ವಿವರಿಸಿದರು.
ಯಾವುದೇ ಯೋಜನೆಗಳನ್ನು ಕಾರ್ಯಗತ ಗೊಳಿಸಿಲ್ಲ :
ಬೆಂಗಳೂರು -ಮಂಗಳೂರು ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ಹೆದ್ದಾರಿ ಪೂರ್ಣವಾಗಿ ಹದಗೆಟ್ಟಿವೆ. ಜನರ ವ್ಯಾಪಾರ ಕಡಿಮೆ ಆಗಿದೆ. ಉದ್ಯೋಗವಿಲ್ಲದೆ ಯುವಜನರು ಕಂಗೆಟ್ಟಿದ್ದಾರೆ. ಸರಕಾರಗಳು ಜನರ ಬೆಂಬಲಕ್ಕೆ ನಿಲ್ಲದ ತೆರಿಗೆ ಹೇರುತ್ತಿವೆ. ಹಾಗಾಗಿ ಜನರ ನೆರವಿಗೆ ಬರುವ ಉದ್ದೇಶದಿಂದ ಜನರಿಗೆ 200 ಯುನಿಟ್ ಉಚಿತ ವಿದ್ಯುತ್ ಹಾಗೂ ಪ್ರತಿ ಮನೆಯ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ. ಕೊಡುಗೆ ನೀಡುವ ಕೊಡುಗೆಗಳನ್ನ ಘೋಷಿಸಿದ್ದೇವೆ ಎಂದು ವಿವರಿಸಿದರು.
ಜ. 22ರಂದು ಮಂಗಳೂರಿನ ಕರಾವಳಿ ಉತ್ಸವ ಮೈದಾನದಲ್ಲಿ ನಡೆಯಲಿರುವ ಪ್ರಜಾಧ್ವನಿ ಕಾರ್ಯಕ್ರಮದಲ್ಲಿ ಪುತ್ತೂರಿನ ಉದ್ಯಮಿ, ಬಿಜೆಪಿಯ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ಅಶೋಕ್ ಕುಮಾರ್ ರೈ ಕಾಂಗ್ರೆಸ್ ಪಕ್ಷಕ್ಕೆಸೇರ್ಪಡೆಯಾಗಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವಿಧಾನ ಪರಿಷತ್ ಮಂಜುನಾಥ್ ಭಂಡಾರಿ, ಕಾಂಗ್ರೆಸ್ ಜಿಲ್ಲಾ ಪ್ರಚಾರ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಮಾಜಿ ಮೇಯರ್ ಶಶಿಧರ್ ಹೆಗ್ಡೆ ಮನಪಾ ವಿಪಕ್ಷ ನಾಯಕ ನವೀನ್ ಡಿ'ಸೋಜಾ ಉಪಸ್ಥಿತರಿದ್ದರು