ಕ್ರಿಕೆಟ್ ಪಂದ್ಯಾಟದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ಯುವಕರಿಬ್ಬರ ಕೊಲೆಯಲ್ಲಿ ಅಂತ್ಯ
Friday, February 17, 2023
ದೊಡ್ಡಬಳ್ಳಾಪುರ: ಕ್ರಿಕೆಟ್ ಆಟದ ವೇಳೆ ಕ್ಷುಲ್ಲಕ ಕಾರಣಕ್ಕೆ ಸಂಭವಿಸಿರುವ ಜಗಳ ಇಬ್ಬರ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ವರದಿಯಾಗಿದೆ.
ಭರತ್ ಹಾಗೂ ಪ್ರತೀಕ್ ಕೊಲೆಯಾದ ಯುವಕರು.
READ
- ಆನ್ಲೈನ್ ಗೇಮ್ ಸಾಲ ತೀರಿಸಲು ದರೋಡೆಗಿಳಿದ ಖದೀಮ: ಮರ ಕತ್ತರಿಸುವ ಯಂತ್ರದಿಂದ ರೈತನ ಕತ್ತು ಕತ್ತರಿಸಿ ಹತ್ಯೆಗೈದ ಕೊಲೆಪಾತಕಿ
- ನಿರ್ದೇಶಕನಾಗಿ ಭಾರೀ ಗ್ಯಾಪ್ ತೆಗೆದುಕೊಳ್ಳಲು ಮೆಗಾಸ್ಟಾರ್ ಚಿರಂಜೀವಿ ಕಾರಣ- ಅಚ್ಚರಿ ಹೇಳಿಕೆ ನೀಡಿದ ರಿಯಲ್ ಸ್ಟಾರ್ ಉಪೇಂದ್ರ
- ನಿವೇದಿತಾ ಗೌಡನೊಂದಿಗೆ ಸಂಬಂಧ ಹೀಗಿತ್ತಾ? ದಾಂಪತ್ಯ ಜೀವನದ ಕಹಿಸತ್ಯವನ್ನು ಬಿಚ್ಚಿಟ್ಟ ಚಂದನ್ ಶೆಟ್ಟಿ ವೀಡಿಯೋ ವೈರಲ್
ದೊಡ್ಡಬೆಳವಂಗಲ ಗ್ರಾಮದಲ್ಲಿ ಶುಕ್ರವಾರ ಕ್ರಿಕೆಟ್ ಪಂದ್ಯಾಟ ಆಯೋಜನೆಯಾಗಿತ್ತು. ಆದರೆ ಕ್ರಿಕೆಟ್ ಆಟದ ವೇಳೆ ಕ್ಷುಲ್ಲಕ ಕಾರಣಕ್ಕೆ ಜಗಳ ನಡೆದೊದೆ. ಈ ಜಗಳದಲ್ಲಿ ಭರತ್ ಹಾಗೂ ಪ್ರತೀಕ್‌ಗೆ ಚಾಕುವಿನಿಂದ ಇರಿಯಲಾಗಿದೆ ಎನ್ನಲಾಗಿದ್ದು, ಘಟನೆ ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಎಸ್‌ಪಿ ಮಲ್ಲಿಕಾರ್ಜುನ ಬಾಲದಂಡಿ ಭೇಟಿ, ಪರಿಶೀಲನೆ ನಡೆಸಿದ್ದು, ದೊಡ್ಡಬೆಳವಂಗಲ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.