ಕಡಬ: ಬೆಳ್ಳಂಬೆಳಗ್ಗೆ ಆನೆ ದಾಳಿಗೆ ಯುವತಿ ಸೇರಿ ಇಬ್ಬರು ಬಲಿ
Monday, February 20, 2023
ಕಡಬ: ಇಲ್ಲಿನ ರೆಂಜಿಲಾಡಿ ಗ್ರಾಮದಲ್ಲಿ ಇಂದು ಬೆಳ್ಳಂಬೆಳಗ್ಗೆ ನಡೆದಿರುವ ಆನೆ ದಾಳಿಗೆ ಯುವತಿ ಸೇರಿದಂತೆ ಇಬ್ಬರು ಬಲಿಯಾಗಿದ್ದಾರೆ.
ರಂಜಿತಾ (21) ಹಾಗೂ ರಮೇಶ್ ರೈ ನೈಲ (55) ಎಂಬವರು ಮೃತಪಟ್ಟ ದುರ್ದೈವಿಗಳು.
ಪೇರಡ್ಕ ಹಾಲು ಸೊಸೈಟಿಯಲ್ಲಿ ಸಿಬ್ಬಂದಿಯಾದ ರಂಜಿತಾ(21) ಸೊಸೈಟಿಗೆ ಮನೆಯಿಂದ ಬೆಳಗ್ಗೆ ತೆರಳುತ್ತಿದ್ದರು. ಅವರು ಕಾಡಂಚಿನ ದಾರಿಯಲ್ಲಿ ಹೋಗುತ್ತಿದ್ದ ವೇಳೆ ನೈಲ ಎಂಬಲ್ಲಿ ಆನೆ ದಾಳಿ ನಡೆಸಿದೆ.
ಆನೆ ದಾಳಿಗೆ ಬೆದರಿದ ರಂಜಿತಾ ಬೊಬ್ಬೆ ಹೊಡೆದ ವೇಳೆ ಆಕೆಯನ್ನು ರಕ್ಷಿಸಲು ಧಾವಿಸಿದ ರಮೇಶ್ ಎಂಬವರ ಮೇಲೂ ಆನೆ ದಾಳಿ ನಡೆಸಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ರಮೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ಸಾಗಿಸುವ ವೇಳೆ ಯುವತಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಈ ಭಾಗದಲ್ಲಿ ಕಳೆದ ಹಲವು ತಿಂಗಳುಗಳಿಂದ ಕಾಡಾನೆಗಳ ಹಾವಳಿ ಮುಂದುವರಿದಿದೆ.