ಬೆಂಕಿ ಅವಘಡದಲ್ಲಿ ವೃದ್ಧ ದಂಪತಿ ಸಜೀವ ದಹನ
Sunday, February 26, 2023
ವಿಜಯಪುರ: ಗುಡಿಸಲಿಗೆ ಆಕಸ್ಮಿಕವಾಗಿ ತಗುಲಿದ ಬೆಂಕಿ ಅವಘಡದಿಂದ ವೃದ್ಧ ದಂಪತಿ ಸಜೀವ ದಹನವಾಗಿರುವ ಘಟನೆ ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರವಲಯದಲ್ಲಿ ಶನಿವಾರ ತಡರಾತ್ರಿ ಸಂಭವಿಸಿದೆ.
ಕರೀಮಸಾಬ ಇಮಾಮಸಾಬ ಟಪಾಲ (82), ಸಾಜನಬಿ ಕರೀಮಸಾಬ ಟಪಾಲ ಮೃತಪಟ್ಟಿರುವ ದುರ್ದೈವಿಗಳು.
ದಂಪತಿ ಗುಡಿಸಲಿನಲ್ಲಿ ಮಲಗಿದ ವೇಳೆ ಚಿಮಣಿಯಿಂದ ಈ ಬೆಂಕಿ ಅವಘಡ ಸಂಭವಿಸಿದೆ. ಇದರಿಂದ ಗುಡಿಸಲು ಸಂಪೂರ್ಣ ಸುಟ್ಟು ಭಸ್ಮವಾಗಿದೆ. ಪರಿಣಾಮ ಮಲಗಿದ್ದ ಈ ಇಬ್ಬರು ವೃದ್ಧ ದಂಪತಿ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಚಡಚಣ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.