ಮಂಗಳೂರು: 23 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ಆರೋಪಿ ಅರೆಸ್ಟ್
Thursday, March 23, 2023
ಮಂಗಳೂರು: 23 ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ಮೋಸ್ಟ್ ವಾಟೆಂಡ್ ವಾರೆಂಟ್ ಆರೋಪಿಯನ್ನು ಸುರತ್ಕಲ್ ಪೊಲೀಸರು ಬಂಧಿಸಿದ್ದಾರೆ.
ಸುರತ್ಕಲ್ ನ ಕಾಟಿಪಳ್ಳ ಕೃಷ್ಣಾಪುರ ನಿವಾಸಿ ಅಝರುದ್ದೀನ್ (29) ಬಂಧಿತ ಆರೋಪಿ.
ಅಝರುದ್ದೀನ್ ಮೇಲೆ ಮಂಗಳೂರು ನಗರ, ದಕ್ಷಿಣ ಕನ್ನಡ ಜಿಲ್ಲೆ ಹಾಗೂ ಉಡುಪಿ ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಒಟ್ಟು 23 ಪ್ರಕರಣಗಳು ದಾಖಲಾಗಿದೆ. ಈತನ ಮೇಲೆ ಜಾಮೀನು ರಹಿತ ವಾರಂಟ್ ಇತ್ತು. ಸುರತ್ಕಲ್ ಪೊಲೀಸ್ ಠಾಣೆಯ ನಿರೀಕ್ಷಕ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಪೊಲೀಸು ಉಪನಿರೀಕ್ಷಕ ಮಲ್ಲಿಕಾರ್ಜುನ್ ಸಿಬ್ಬಂದಿಯಾದ ಅಜಿತ್ ಮ್ಯಾಥ್, ಮಣಿಕಂಠ, ಕಾರ್ತಿಕ್ ತಂಡ ಬಂಧಿಸಿದೆ.
ಅಝರುದ್ದೀನ್ ಮೇಲೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ 2, ಉಳ್ಳಾಲ ಪೊಲೀಸ್ ಠಾಣೆಯಲ್ಲಿ 4, ಬಜ್ಪೆ ಪೊಲೀಸ್ ಠಾಣೆಯಲ್ಲಿ 2, ಬರ್ಕೆ ಪೊಲೀಸ್ ಠಾಣೆಯಲ್ಲಿ 3, ಕೋಣಾಜೆ ಪೊಲೀಸ್ ಠಾಣೆಯಲ್ಲಿ 3, ಮುಲ್ಕಿ ಪೊಲೀಸ್ ಠಾಣೆಯಲ್ಲಿ 1, ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1, ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ 1, ವಿಟ್ಲ ಪೊಲೀಸ್ ಠಾಣೆಯಲ್ಲಿ 1, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ 1, ಕಾಪು ಪೊಲೀಸ್ ಠಾಣೆಯಲ್ಲಿ 1, ಮಣಿಪಾಲ ಪೊಲೀಸ್ ಠಾಣೆಯಲ್ಲಿ 1,ಮಲ್ಪೆ ಪೊಲೀಸ್ ಠಾಣೆಯಲ್ಲಿ 1, ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 1 ಪ್ರಕರಣ ದಾಖಲಾಗಿದೆ. ಇದೀಗ ಪೊಲೀಸರು ಆತನನ್ನು ಬಂಧಿಸಿದ್ದಾರೆ.