ಮಂಗಳೂರು: ನನಗೆ ಎಲ್ಲಿ ಹೋದ್ರು ಇದೊಂದು ತಲೆನೋವು: ಆಝಾನ್ ವಿರುದ್ಧ ಈಶ್ವರಪ್ಪ ಗರಂ
Sunday, March 12, 2023
ಮಂಗಳೂರು: ನನಗೆ ಎಲ್ಲಿ ಹೋದ್ರೂ ಇದೊಂದು ತಲೆನೋವು ಎಂದು ಮಂಗಳೂರಿನಲ್ಲಿ ಆಝಾನ್ ವಿರುದ್ಧ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಗರಂ ಆದ ಘಟನೆ ರವಿವಾರ ನಡೆದಿದೆ.
ನಗರದ ಕಾವೂರು ಶಾಂತಿನಗರ ಮೈದಾನದಲ್ಲಿ ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಯ ಬಹಿರಂಗ ಸಭೆಯಲ್ಲಿ ಈಶ್ವರಪ್ಪ ಮಾತನಾಡಲು ಆರಂಭಿಸುತ್ತಿದ್ದಂತೆ ಆಝಾನ್ ಧ್ವನಿ ಕೇಳಲಾರಂಭಿಸಿದೆ. ಈ ವೇಳೆ ಗರಂ ಅವರು, ಸುಪ್ರೀಂ ಕೋರ್ಟ್ ಆದೇಶವಿದ್ದು, ಇಂದಲ್ಲ ನಾಳೆ ಇದು ಖತಂ ಆಗಲಿದೆ. ಇದರಲ್ಲೇನು ಅನುಮಾನ ಬೇಡ ಎಂದು ಹೇಳಿದರು.
ಪ್ರಧಾನಿ ನರೇಂದ್ರ ಮೋದಿಯವರು ಎಲ್ಲಾ ಧರ್ಮಗಳಿಗೆ ಗೌರವ ಕೊಡಬೇಕೆಂದು ಹೇಳುತ್ತಾರೆ. ಮೈಕ್ ನಲ್ಲಿ ಕೂಗಿದ್ದಲ್ಲಿ ಮಾತ್ರವೇ ಅಲ್ಲಾಗೆ ಕಿವಿ ಕೇಳೋದಾ. ನಮ್ಮ ದೇವಸ್ಥಾನಗಳಲ್ಲೂ ಪೂಜೆ ಮಾಡುತ್ತೇವೆ. ಶ್ಲೋಕ, ಭಜನೆಗಳನ್ನು ಹೇಳಲಾಗುತ್ತದೆ. ಅವರಿಗಿಂತ ಹೆಚ್ಚು ಭಕ್ತಿ ನಮ್ಮಲ್ಲೂ ಇದೆ. ಪ್ರಪಂಚದಲ್ಲಿ ಧರ್ಮವನ್ನು ಉಳಿಸುವಂಥಹ ದೇಶ ಭಾರತ ಮಾತ್ರ. ಆದರೆ ಮೈಕ್ ಹಿಡ್ಕೊಂಡು ಮಾತ್ರ ಹೇಳಿದರೆ ಅಲ್ಲಾನಿಗೆ ಕಿವುಡಾ ಎಂದು ಕೇಳಬೇಕಾಗುತ್ತದೆ. ಆದ್ದರಿಂದ ಈ ಸಮಸ್ಯೆ ಆದಷ್ಟು ಬೇಗ ಪರಿಹಾರ ಆಗಬೇಕು ಎಂದು ಕೆ.ಎಸ್.ಈಶ್ವರಪ್ಪ ಹೇಳಿದರು.