ಪ್ರೀತಿಸಿದ ಯುವತಿಯನ್ನೇ ಉಸಿರುಗಟ್ಟಿಸಿ ಕೊಲೆಗೈದ ಪಾಗಲ್ ಪ್ರೇಮಿ
Wednesday, March 15, 2023
ಬೆಂಗಳೂರು: ಪ್ರೀತಿಸಿದ ಯುವತಿಯನ್ನೇ ಪಾಗಲ್ ಪ್ರೇಮಿಯೋರ್ವನು ಉಸಿರುಗಟ್ಟಿಸಿ ಕೊಲೆಗೈದಿರುವ ಘಟನೆ ವಿಲ್ಸನ್ ಗಾರ್ಡನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಶಾಲಿನಿ ಮೃತಪಟ್ಟ ಯುವತಿ. ಆರೋಪಿ ಮನೋಜ್ ಪ್ರೇಯಸಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿರುವ ಬಗ್ಗೆ ಅನುಮಾನ ವ್ಯಕ್ತವಾಗಿದೆ.
ಮನೋಜ್ ಹಾಗೂ ಶಾಲಿನಿ ಕೆಲವು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಶಾಲಿನಿಗೆ ಬೇರೊಬ್ಬ ಯುವಕನೊಂದಿಗೆ ಆಕೆಯ ಮನೆಯವರು ಮದುವೆ ನಿಶ್ಚಯ ಮಾಡಿದ್ದರು. ಇದೇ ವಿಚಾರವಾಗಿ ಇಬ್ಬರ ನಡುವೆ ಜಗಳ ನಡೆದಿದೆ. ಈ ಹಿನ್ನೆಲೆಯಲ್ಲಿ ಯಾರೂ ಇಲ್ಲದೆ ಸಂದರ್ಭದಲ್ಲಿ ಮಂಗಳವಾರ ಸಂಜೆ ಶಾಲಿನಿ ನಿವಾಸಕ್ಕೆ ಮನೋಜ್ ಬಂದಿದ್ದಾನೆ. ಈ ವೇಳೆ ಇಬ್ಬರ ನಡುವೆ ಮತ್ತೆ ಜಗಳ ನಡೆದಿದೆ.
ವಾಗ್ವಾದ ತಾರಕಕ್ಕೇರಿದ ಬಳಿಕ ಮನೋಜ್ ದಿಂಬಿನಿಂದ ಉಸಿರುಗಟ್ಟಿಸಿ ಶಾಲಿನಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಅಲ್ಲಿಂದ ಕೆ.ಪಿ.ಅಗ್ರಹಾರದಲ್ಲಿರುವ ತನ್ನ ಮನೆಗೆ ಹೋಗಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ಮನೋಜ್‌ನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲು ಮಾಡಿದ್ದು, ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾನೆ.
ಅನುಮಾನಾಸ್ಪದ ಸಾವು ಎಂದು ಪ್ರಕರಣ ದಾಖಲಿಸಿಕೊಂಡ ವಿಲ್ಸನ್ ಗಾರ್ಡನ್ ಠಾಣೆಯ ಪೊಲೀಸರು, ವಿಚಾರಣೆ ನಡೆಸಿದ್ದಾರೆ. ಆರೋಪಿ ಮನೋಜ್ ಅತ್ಯಾಚಾರ ಎಸಗಿ ಶಾಲಿನಿಯನ್ನು ಕೊಲೆ ಮಾಡಿರುವುದು ವೈದ್ಯಕೀಯ ಪರೀಕ್ಷೆಯ ವೇಳೆ ಪತ್ತೆಯಾಗಿದೆ.