Subrahmanya:-ಬೈಕ್ ಸ್ಕಿಡ್ ಆಗಿ ಒರ್ವ ಸಾವು.ಇನ್ನೊರ್ವನಿಗೆ ಗಾಯ.
Saturday, March 11, 2023
ಸುಬ್ರಹ್ಮಣ್ಯ
ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಮಲಬಾರ್ ಬಸ್‌ನ್ನು ಓವರ್ ಟೇಕ್ ಮಾಡುವ ವೇಳೆ ಬೈಕ್ ಸ್ಕಿಡ್ ಆಗಿ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡು ಬೈಕ್ ಸವಾರ ಮೃತಪಟ್ಟು ಇನ್ನೊರ್ವ ಗಾಯಗೊಂಡ ಘಟನೆ ಶುಕ್ರವಾರ ರಾತ್ರಿ ಸುಬ್ರಹ್ಮಣ್ಯ ಸಮೀಪದ ಇಂಜಾಡಿಯಲ್ಲಿ ಸಂಭವಿಸಿದೆ.
ಸುಬ್ರಹ್ಮಣ್ಯದ ಕಲ್ಲಗುಡ್ಡೆ ನಿವಾಸಿ ರಮೇಶ್ (27) ಎಂಬವರು ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಕಾಸರಗೋಡಿನಿಂದ ಸುಬ್ರಹ್ಮಣ್ಯ ಕಡೆಗೆ ಹೋಗುತ್ತಿದ್ದ ಬಸ್‌ನ್ನು ಬೈಕ್ ಸವಾರ ಓವರ್ ಟೇಕ್ ಮಾಡಿ ಮುಂದೆ ಹೋಗುತಿದ್ದಾಗ ಬೈಕ್ ಸ್ಕಿಡ್ ಆಗಿದ್ದು ಈ ವೇಳೆ ರಸ್ತೆಗೆಸೆಯಲ್ಪಟ್ಟು ಗಂಭೀರ ಗಾಯಗೊಂಡ ರಮೇಶ್ ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಇನ್ನೊರ್ವ ಗಾಯಾಳು ಸಣ್ಣ ಪುಟ್ಟ ಗಾಯದಿಂದ ಪಾರಾಗಿದ್ದಾರೆ. ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.