ಪುತ್ತೂರಿನಲ್ಲಿ ಶಕುಂತಳ ಶೆಟ್ಟಿಗೆ ಕಾಂಗ್ರೆಸ್ ( CONGRESS) ಟಿಕೆಟ್ ? - ಅಶೋಕ್ ರೈ ನಡೆ ಏನು?
Sunday, April 9, 2023
ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ತಿಂಗಳು ಮಾತ್ರ ಬಾಕಿ ಇದೆ. ಕಾಂಗ್ರೆಸ್ ಪಕ್ಷವು ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳಿಗೆ ಟಿಕೆಟ್ ಘೋಷಿಸಿದೆ. ಆದರೆ ಇನ್ನೂ ಪುತ್ತೂರು ಸೇರಿದಂತೆ ಮೂರು ಕ್ಷೇತ್ರಗಳಿಗೆ ಟಿಕೆಟ್ ಅಂತಿಮಗೊಳಿಸಿಲ್ಲ.
ಆದರೆ ಕಾಂಗ್ರೆಸ್ ಹೈಕಮಾಂಡ್ ಪುತ್ತೂರು ಕ್ಷೇತ್ರದಲ್ಲಿ ಅಳೆದು ತೂಗಿ ಟಿಕೆಟ್ ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ. ಪುತ್ತೂರು ಕ್ಷೇತ್ರಕ್ಕೆ ಮಾಜಿ ಶಾಸಕಿ ಶಕುಂತಳ ಶೆಟ್ಟಿಗೆ ಟಿಕೆಟ್ ಅಂತಿಮಗೊಳಿಸಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಶಕುಂತಳ ಶೆಟ್ಟಿ ಪುತ್ತೂರು ಕ್ಷೇತ್ರದಲ್ಲಿ ಬಿಜೆಪಿಯಲ್ಲಿ ಶಾಸಕರಾಗಿ ಗೆದ್ದವರು. ಬಿಜೆಪಿಯಿಂದ ಮುನಿಸುಗೊಂಡು ನಂತರ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡವರು. 2013 ರಲ್ಲಿ ಪುತ್ತೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಜಯ ಗಳಿಸಿದ್ದರು. 2018 ರಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಶಕುಂತಳ ಶೆಟ್ಟಿ ಬಿಜೆಪಿ ಎದುರು ಸೋಲನ್ನು ಅನುಭವಿಸಿದ್ದರು. ಈ ಬಾರಿಯು ಟಿಕೆಟ್ ಆಕಾಂಕ್ಷಿಯಾಗಿದ್ದ ಶಕುಂತಳ ಶೆಟ್ಟಿಗೆ ಕಾಂಗ್ರೆಸ್ ಹೈಕಮಾಂಡ್ ಟಿಕೆಟ್ ಅಂತಿಮಗೊಳಿಸಿದೆ ಎಂದು ತಿಳಿದುಬಂದಿದೆ.
ಇನ್ನೂ ಕಾಂಗ್ರೆಸ್ ಟಿಕೆಟ್ ಆಕಾಂಕ್ಷೆಯಲ್ಲಿ ಅಶೋಕ್ ರೈ ಕಾಂಗ್ರೆಸ್ ಪಕ್ಷ ಸೇರಿದ್ದರು. ಬಿಜೆಪಿ ಯಲ್ಲಿ ತನ್ನನ್ನು ಗುರುತಿಸಿಲ್ಲ ಎಂದು ಭ್ರಮ ನಿರಶನಗೊಂಡು ಕಾಂಗ್ರೆಸ್ ಪಕ್ಷ ಸೇರಿದ್ದರು. ಮಂಗಳೂರಿನಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಸಿದ್ದರಾಮಯ್ಯ ಮತ್ತು ಡಿ ಕೆ ಶಿವಕುಮಾರ್ ಸಮ್ಮುಖದಲ್ಲಿ ಅಶೋಕ್ ರೈ ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗಿದ್ದರು. ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಅಶೋಕ್ ರೈ ಕಾಂಗ್ರೆಸ್ ಪಕ್ಷದ ಅಧಿಕೃತ ಪಟ್ಟಿ ಘೋಷಣೆ ನಿರೀಕ್ಷಿಸುತ್ತಿದ್ದಾರೆ. ಒಂದು ವೇಳೆ ತಮಗೆ ಟಿಕೆಟ್ ನಿರಾಕರಣೆಯಾದರೆ ಮುಂದೆ ಸ್ವತಂತ್ರ ವಾಗಿ ಸ್ಪರ್ಧಿಸಬೇಕೆ ಎಂಬ ಬಗ್ಗೆ ಆಪ್ತರೊಂದಿಗೆ ಸಮಾಲೋಚನೆ ನಡೆಸುತ್ತಿದ್ದಾರೆ.