-->
ಕಾಲೇಜು ಬಳಿ ನಿಲ್ಲಿಸದ ಬಸ್ : ಹೊರ ಜಿಗಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ ದಾರುಣ ಸಾವು

ಕಾಲೇಜು ಬಳಿ ನಿಲ್ಲಿಸದ ಬಸ್ : ಹೊರ ಜಿಗಿದ ಇಂಜಿನಿಯರಿಂಗ್ ವಿದ್ಯಾರ್ಥಿನಿ ದಾರುಣ ಸಾವು

ವಿಜಯನಗರ: ಕಾಲೇಜು ಬಳಿ ನಿಲ್ಲಿಸದಿದ್ದಕ್ಕೆ ಬಸ್‌ನಿಂದ ಹೊರಗೆ ಜಿಗಿದು ಗಂಭೀರವಾಗಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ರಾಣೆಬೆನ್ನೂರಿನಲ್ಲಿ ನಡೆದಿದೆ.

ಶ್ವೇತಾ ಮೃತ ವಿದ್ಯಾರ್ಥಿನಿ. ಈಕೆ ಹೂವಿನಹಡಗಲಿಯ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಇಲೆಕ್ಟ್ರಾನಿಕ್ ಮತ್ತು ಕಮ್ಯೂನಿಕೇಷನ್ ವಿಭಾಗದ ಪ್ರಥಮ ವರ್ಷದ ವಿದ್ಯಾರ್ಥಿನಿ.

ಎ.12ರಂದು ಮಧ್ಯಾಹ್ನ ಹಡಗಲಿಯಿಂದ ರಾಣೆಬೆನ್ನೂರಿಗೆ  ಪ್ರಯಾಣಿಸುತ್ತಿದ್ದ ಸಾರಿಗೆ ಬಸ್ ನಲ್ಲಿ ಶ್ವೇತಾ ಕಾಲೇಜಿಗೆ ಪ್ರಯಾಣಿಸುತ್ತಿದ್ದಳು. ಆದರೆ ಕಾಲೇಜು ಬಳಿಯ ಬಸ್ ನಿಲ್ದಾಣದಲ್ಲಿ ಬಸ್ ನಿಲ್ಲಿಸಿರಲಿಲ್ಲ‌. ಆದ್ದರಿಂದ ಶ್ವೇತಾ ಬಸ್‌ನಿಂದ ಜಿಗಿದಿದ್ದಾಳೆ. ಪರಿಣಾಮ ಆಕೆ ಗಂಭೀರವಾಗಿ ಗಾಯಗೊಂಡಿದ್ದಾಳೆ. ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಶ್ವೇತಾ ಮೃತಪಟ್ಟಿದ್ದಾಳೆ.

ಹಡಗಲಿ ಪಟ್ಟಣದ ಬಿಸಿಎಂ ಹಾಸ್ಟೆಲ್ ಶ್ವೇತಾ ವಾಸವಿದ್ದಳು. ಶ್ವೇತಾಳ ಸಾವಿನಿಂದ ವಿದ್ಯಾರ್ಥಿಗಳು ರೊಚ್ಚಿಗೆದ್ದಿದ್ದು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನಾ ಸ್ಥಳಕ್ಕೆ ಹಡಗಲಿ ಪೊಲೀಸರ ಭೇಟಿ ನೀಡಿ ವಿದ್ಯಾರ್ಥಿಗಳ ಮನವೊಲಿಸಲು ಯತ್ನಿಸಿದ್ದಾರೆ. ಘಟನೆ ಬಳಿಕ ಸಾರಿಗೆ ಬಸ್ ಚಾಲಕನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೂವಿನಹಡಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ. 

Ads on article

Advertise in articles 1

advertising articles 2

Advertise under the article