ಬಾಯ್ ಫ್ರೆಂಡ್ ನೊಂದಿಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಬಾಲಿವುಡ್ ನಟಿ ಜಾನ್ವಿ ಕಪೂರ್
Monday, April 3, 2023
ಮುಂಬೈ: ಬಾಲಿವುಡ್ ನಟಿ ಜಾನ್ವಿ ಕಪೂರ್ ಸಿನಿಮಾಗಿಂತ ಹೆಚ್ಚಾಗಿ ವೈಯಕ್ತಿಕ ವಿಚಾರಗಳಿಗಿಂತ ಹೆಚ್ಚಾಗಿ ಸುದ್ದಿಯಲ್ಲಿರುತ್ತಾರೆ. ಜಾನ್ವಿ ಕಪೂರ್ ಮತ್ತು ಶಿಖರ್ ಪಹಾರಿಯಾ ಇಬ್ಬರೂ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಎಲ್ಲೆಡೆ ಸುದ್ದಿಯಲ್ಲಿದೆ. ಅದಕ್ಕೆ ಪೂರಕವೆಂಬಂತೆ ಜಾನ್ವಿ ಕಪೂರ್ ಹಾಗೂ ಅವರ ಬಾಯ್‌ಫ್ರೆಂಡ್ ಶಿಖರ್ ಪಹಾರಿಯಾ ಜೊತೆಯಾಗಿ ತಿರುಪತಿ ದೇವಸ್ಥಾನದಲ್ಲಿ ಕಾಣಿಸಿಕೊಂಡಿದ್ದಾರೆ.
ಇದರ ವಿಡಿಯೋ ಹಾಗೂ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸೋಮವಾರ ಬೆಳ್ಳಂಬೆಳಗ್ಗೆ ಜಾನ್ವಿ ಮತ್ತು ಶಿಖರ್ ಪಹಾರಿಯಾ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿ ವೆಂಕಟೇಶ್ವರನಿಗೆ ಪ್ರಾರ್ಥನೆ ಸಲ್ಲಿಸಿದರು. ಜಾನ್ವಿ ಕಪೂರ್ ಹಸಿರು ಮತ್ತು ಪಿಂಕ್ ಬಣ್ಣದ ದಾವಣಿಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ.
ಜಾನ್ವಿ ಮತ್ತು ಶಿಖರ್ ಪಹಾರಿಯಾ ಜತೆ ಬ್ರೇಕಪ್ ಮಾಡಿಕೊಂಡು ದೂರವಾಗಿದ್ದಾರೆ ಎನ್ನಲಾಗಿತ್ತು. ಇದೀಗ ಇಬ್ಬರೂ ಮತ್ತೆ ಒಂದಾಗಿದ್ದು, ಒಟ್ಟಿಗೆ ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚಿಗಷ್ಟೆ ನಡೆದ ನೀತಾ ಅಂಬಾನಿ ಅವರ ಕಾರ್ಯಕ್ರಮದಲ್ಲೂ ಇಬ್ಬರೂ ಜೊತೆಯಾಗಿ ಕಾಣಿಸಿಕೊಂಡಿದ್ದರು. ಇದೀಗ ತಿರುಪತಿಗೆ ಭೇಟಿ ನೀಡುವ ಮೂಲಕ ಮತ್ತೆ ಇವರ ಪ್ರೀತಿ ಸಖತ್ ಸುದ್ದಿಯಲ್ಲಿದೆ.