kokkada:-ಅಕ್ಕಪಕ್ಕದ ಇಬ್ಬರು ಯುವತಿಯರು ಒಂದೇ ದಿನ ಹೊಟ್ಟೆನೋವಿನಿಂದ ನಿಗೂಢವಾಗಿ ಸಾವು!
Friday, April 7, 2023
ಕೊಕ್ಕಡ
ಹೊಟ್ಟೆನೋವಿನಿಂದ ಬಳಲಿ ನಂತರದಲ್ಲಿ ವಿವಿಧ ಆಸ್ಪತ್ರೆಗೆ ದಾಖಲಾದ ಅಕ್ಕಪಕ್ಕದ ಮನೆಯ ಇಬ್ಬರು ಯುವತಿಯರು ಮೃತಪಟ್ಟಿದ್ದು,ಇದೀಗ ಈ ಯುವತಿಯರ ಮರಣದಲ್ಲಿ ಅನುಮಾನ ವ್ಯಕ್ತವಾಗಿದೆ.
ನೆಲ್ಯಾಡಿ ಸಮೀಪದ ಪಟ್ರಮೆ ಗ್ರಾಮದ ಪಟ್ಟೂರು ಬಾಬು ಎಂಬವರ ಪುತ್ರಿ ರಕ್ಷಿತಾ (22) ಮತ್ತು ಶ್ರೀನಿವಾಸ ಆಚಾರ್ಯ ಎಂಬವರ ಪುತ್ರಿ ಲಾವಣ್ಯ (21) ಮೃತಪಟ್ಟವರು ಇವರಲ್ಲಿ ಲಾವಣ್ಯ ಸುರತ್ಕಲ್ ಆಸ್ಪತ್ರೆಯಲ್ಲಿ ಮೃತಪಟ್ಟರೆ, ರಕ್ಷಿತಾ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟರೆನ್ನಲಾಗಿದೆ.
ಈ ಯುವತಿಯರಿಬ್ಬರು ಸೇವಾ ಪ್ರತಿನಿಧಿಗಳಾಗಿ ಕೆಲಸ ಮಾಡುತ್ತಿದ್ದರು. ಎ.4ರಂದು ಸಂಜೆ ರಕ್ಷಿತಾ ಮತ್ತು ಲಾವಣ್ಯ ತಮ್ಮ ಮನೆಯಲ್ಲಿ ಹೊಟ್ಟೆ ನೋವಿನಿಂದ ನರಳಾಡಿದ್ದರು. ಇವರಿಬ್ಬರನ್ನು ಮೊದಲು ನೆಲ್ಯಾಡಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿ, ನಂತರದಲ್ಲಿ
ರಕ್ಷಿತಾ ಅವರನ್ನು ಅವರ ಮನೆಯವರು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಮತ್ತು ಲಾವಣ್ಯರನ್ನು ಅವರ ಮನೆಯವರು ಪುತ್ತೂರಿನ ಆಸ್ಪತ್ರೆಗೆ ಕರೆದೊಯ್ದು ವೈದ್ಯರ ಸಲಹೆಯಂತೆ ಹೆಚ್ಚಿನ ಚಿಕಿತ್ಸೆಗಾಗಿ ಸುರತ್ಕಲ್ ಆಸ್ಪತ್ರೆಗೆ ದಾಖಲಿಸಿದ್ದರು.