ಮೀಸಲು ಕ್ಷೇತ್ರದ ಟಿಕೆಟ್ ನೀಡಿ ದಲಿತೋದ್ದಾರ ಎಂದ ನಳಿನ್- ಸಾಮಾಜಿಕ ಜಾಲತಾಣದಲ್ಲಿ ತರಾಟೆ
Wednesday, April 12, 2023
ಮಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಮಾಡಿರುವ ಫೇಸ್‌ಬುಕ್ ಪೋಸ್ಟ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ತರಾಟೆಗೆ ತೆಗೆದುಕೊಳ್ಳಲಾಗುತ್ತಿದೆ.
ಬಿಜೆಪಿ ಮಂಗಳವಾರ ರಾತ್ರಿ ಬಿಜೆಪಿ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಈ ಪಟ್ಟಿಯಲ್ಲಿ ಸುಳ್ಯ ಮೀಸಲು ಕ್ಷೇತ್ರದಲ್ಲಿ ಭಾಗೀರಥಿ ಮುರುಳ್ಯ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಸಚಿವ ಅಂಗಾರ ಅವರಿಗೆ ಟಿಕೆಟ್ ನಿರಾಕರಿಸಿ ಭಾಗೀರಥಿ ಅವರಿಗೆ ಟಿಕೆಟ್ ನೀಡಲಾಗಿದೆ.
ಇದನ್ನು ಸಾಮಾಜಿಕ ಜಾಲತಾಣದಲ್ಲಿ ಬರೆದಿರುವ ನಳಿನ್ ಕುಮಾರ್ ಕಟೀಲ್ "ದಲಿತೋದ್ಧಾರ ಎಂಬುದು ಬಿಜೆಪಿಗೆ ಭಾಷಣದ ಸರಕಲ್ಲ.
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ, ಸಾಂಸ್ಕೃತಿಕ ಶ್ರೀಮಂತಿಕೆ ಹೊಂದಿರುವ ಆದಿದ್ರಾವಿಡ ಸಮುದಾಯದ ಓರ್ವ ಮಹಿಳೆ, ಮಹಿಳಾ ಮೋರ್ಚಾದ ಸಾಮಾನ್ಯ ಕಾರ್ಯಕರ್ತೆ 'ಭಾಗೀರತಿ ಮುರುಲ್ಯ'ರನ್ನು ಅಭ್ಯರ್ಥಿಯಾಗಿ ಆಯ್ಕೆ ಮಾಡಿದೆ.
ಈ ಎಲ್ಲವೂ ಬಿಜೆಪಿಯಲ್ಲಿ ಮಾತ್ರ ಸಾಧ್ಯ! " ಎಂದು ಪೋಸ್ಟ್ ಮಾಡಿದ್ದಾರೆ.
ಮೀಸಲು ಕ್ಷೇತ್ರದಲ್ಲಿ ದಲಿತರಿಗೆ ನೀಡಲೇಬೇಕಾದ ಟಿಕೆಟ್ ನ್ನು ದಲಿತರಿಗೆ ನೀಡಿ ದಲಿತೋದ್ದಾರ ಎಂದು ಪೋಸ್ಟ್ ಮಾಡಿದ ನಳಿನ್ ಕುಮಾರ್ ಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆಗಳು ವ್ಯಕ್ತವಾಗುತ್ತಿದೆ.