ಮಂಗಳೂರು: ನಾಳೆ ಗೃಹ ಸಚಿವ ಅಮಿತ್ ಶಾ ರೋಡ್ ಶೋ
Friday, April 28, 2023
ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಬಿರುಸಿನ ಪ್ರಚಾರ ನಡೆಯುತ್ತಿದ್ದು, ಎ.29(ನಾಳೆ)ರಂದು ಗೃಹ ಸಚಿವ ಅಮಿತ್ ಶಾ ಮಂಗಳೂರಿನಲ್ಲಿ ರೋಡ್ ಶೋ ನಡೆಸಲಿದ್ದಾರೆ.
ನಾಳೆ ರಾಜ್ಯ ಪ್ರವಾಸದಲ್ಲಿರುವ ಅವರು ಬೆಳಗ್ಗೆ ದಾವಣಗೆರೆಯಿಂದ ಹೆಲಿಕಪ್ಟಾರ್ ಮೂಲಕ ಮಡಿಕೇರಿಗೆ ಆಗಮಿಸಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಉಡುಪಿಗೆ ಆಗಮಿಸಿ ಕಟಪಾಡಿಯಲ್ಲಿ ನಡೆಯುವ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಸಿದ್ದಾಪುರ ಬೈಂದೂರಿನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಿ ಮಂಗಳೂರಿಗೆ ಆಗಮಿಸಲಿದ್ದಾರೆ.
ಮಂಗಳೂರಿನಲ್ಲಿ 5.40 ರಿಂದ 6.40ರವರೆಗೆ ಪುರಭವನದಿಂದ ನವಭಾರತ ಸರ್ಕಲ್ ವರೆಗೆ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಆ ಬಳಿಕ 6.50 ಕ್ಕೆ ಓಶಿಯನ್ ಪರ್ಲ್ ಗೆ ಆಗಮಿಸಲಿದ್ದಾರೆ. ಅಲ್ಲಿ 7-8 ರವರೆಗೆ ಪಕ್ಷದ ಆಂತರಿಕ ಸಭೆಯಲ್ಲಿ ಭಾಗವಹಿಸಲಿದ್ದಾರೆ. ಅಲ್ಲಿಯೇ ಭೋಜನ ಸವಿದು ಬಳಿಕ 8.45ರವೇಳೆಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ತೆರಳಿ ಅಲ್ಲಿಂದ ವಿಮಾನದ ಮೂಲಕ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.