ಬೆಳ್ತಂಗಡಿಯ ವಿವಾಹಿತೆ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು
Thursday, April 6, 2023
ಬೆಳ್ತಂಗಡಿ: ಇಲ್ಲಿನ ಲಾಯಿಲ ನಿವಾಸಿ ವಿವಾಹಿತ ಮಹಿಳೆಯೋರ್ವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಲಾಯಿಲ ಹೊಸಕುಮೇರು ನಿವಾಸಿ ಪುತ್ರಿ ಯಶಸ್ವಿನಿ ಆತ್ಮಹತ್ಯೆಗೆ ಶರಣಾದ ಮಹಿಳೆ.
ಬೆಳ್ತಂಗಡಿ ಪಟ್ಟಣ ಪಂಚಾಯತ್ ಕಚೇರಿಯಲ್ಲಿ ಯಶಸ್ವಿನಿ ಹೊರಗುತ್ತಿಗೆ ಸಿಬ್ಬಂದಿಯಾಗಿ ಕಾರ್ಯನಿರ್ವಹಿಸಿದ್ದರು. ಇವರನ್ನು ಮಂಗಳೂರಿನ ಯುವಕನಿಗೆ ವಿವಾಹ ಮಾಡಿಕೊಡಲಾಗಿತ್ತು. ಆದರೆ ಅವರು ಮಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆದರೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.