Sulya:- ರಾಜಕೀಯ ನಿವೃತ್ತಿ ನಿರ್ಧಾರ ಹೇಳಿಕೆ ಹಿಂಪಡೆದ ಸಚಿವ ಎಸ್. ಅಂಗಾರ: ಮತ್ತೆ ಸಕ್ರಿಯವಾಗಿ ಚುನಾವಣಾ ಪ್ರಚಾರಕ್ಕೆ ಹೋಗುತ್ತೇನೆ..ಎಸ್.ಅಂಗಾರ
Friday, April 14, 2023
ಸುಳ್ಯ
ರಾಜಕೀಯ ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿಯುತ್ತಿದ್ದು, ಮತ್ತೆ ರಾಜಕೀಯದಲ್ಲಿ ಸಕ್ರೀಯವಾಗುತ್ತೇನೆ.ಮಾತ್ರವಲ್ಲದೆ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಪರವಾಗಿ ಚುನಾವಣಾ ಪ್ರಚಾರಕ್ಕೂ ಹೋಗುತ್ತೇನೆ ಎಂದು ಸಚಿವ ಎಸ್.ಅಂಗಾರ ಅವರು ಹೇಳಿದ್ದಾರೆ.
ಸುಳ್ಯ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಂಗಾರ ಅವರು ರಾಜಕೀಯ ನಿವೃತ್ತಿ ಘೋಷಣೆಯನ್ನು ಹಿಂಪಡೆದರು.ಬಿಜೆಪಿ ಅಭ್ಯರ್ಥಿ ಘೋಷಣೆ ವೇಳೆ ಅಭ್ಯರ್ಥಿ ಸ್ಥಾನ ಸಿಗದ ನೋವಿನಿಂದ ಅಂದು ರಾಜಕೀಯ ನಿವೃತ್ತಿ ಹೇಳಿಕೆ ನೀಡಿದ್ದೇನೆ. ಆದರೆ ಬಳಿಕದಲ್ಲಿ ನನ್ನ ನಿರ್ಧಾರವನ್ನು ಬದಲಾಯಿಸಿದ್ದೇನೆ. ಮಾತ್ರವಲ್ಲದೆ ಬಿಜೆಪಿ ಪಕ್ಷದಲ್ಲಿದ್ದುಕೊಂಡೇ ಈಗಾಗಲೇ ಪಕ್ಷ ಘೋಷಣೆ ಮಾಡಿರುವ ಪಕ್ಷದ ಅಭ್ಯರ್ಥಿ ಭಾಗೀರಥಿ ಮುರುಳ್ಯ ಅವರ ಗೆಲುವಿಗಾಗಿ ಪೂರಕ ಕೆಲಸ ಮಾಡುತ್ತೇನೆ ಎಂದು ಸಚಿವ ಎಸ್.ಅಂಗಾರ ತಿಳಿಸಿದರು.