ಮೇಲ್ಸೇತುವೆಯಿಂದ ಕಣಿವೆಗೆ ಬಿದ್ದ ಬಸ್: 10 ಮಂದಿ ದಾರುಣ ಸಾವು, 20ಕ್ಕೂ ಅಧಿಕ ಮಂದಿಯ ಸ್ಥಿತಿ ಚಿಂತಾಜನಕ
Tuesday, May 30, 2023
ಶ್ರೀನಗರ: ಸಾರಿಗೆ ಬಸ್ಸೊಂದು ಸೇತುವೆಯ ಮೇಲ್ಗಡೆಯಿಂದ ಕಣಿವೆಗೆ ಬಿದ್ದ ಪರಿಣಾಮ 10 ಮಂದಿ ದಾರುಣವಾಗಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಜಾಜ್ಜರ್ ಕೋಟ್ಲಿ ಬಳಿಯಿರುವ ಜಮ್ಮು ಮತ್ತು ಕಾಶ್ಮೀರ ರಾಷ್ಟ್ರೀಯ ಹೆದ್ದಾರಿಯಲ್ಲಿ ಮೇ 30ರಂದು ಬೆಳ್ಳಂಬೆಳಗ್ಗೆ ನಡೆದಿದೆ.
ಅಪಘಾತ ನಡೆದ ಸಂದರ್ಭ 75 ಪ್ರಯಾಣಿಕರನ್ನು ಹೊತ್ತ ಬಸ್ ಅಮೃತಸರದಿಂದ ಕತ್ರಾ ಕಡೆಗೆ ತೆರಳುತ್ತಿತ್ತು. ಆದರೆ ಚಾಲಕನ ನಿಯಂತ್ರಣ ಕಳೆದುಕೊಂಡ ಬಸ್ ಸೇತುವೆಯಿಂದ ಕೆಳಗೆ ಬಿದ್ದು ಈ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ 10 ಮಂದಿ ದಾರುಣವಾಗಿ ಮೃತಪಟ್ಟಿದ್ದಾರೆ. ಸುಮಾರು 20ಕ್ಕೂ ಅಧಿಕ ಮಂದಿಯ ಸ್ಥಿತಿ ಗಂಭೀರವಾಗಿದ್ದು, ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಿನ್ನೆ ರಾಜಸ್ಥಾನದ ಜುಂಜುನು ಜಿಲ್ಲೆಯಲ್ಲಿ ಟ್ರ್ಯಾಕ್ಟರ್ ಟ್ರಾಲಿ ಕಣಿವೆಗೆ ಬಿದ್ದ ಪರಿಣಾಮ ಆರು ಮಂದಿ ಮಹಿಳೆಯರು ಹಾಯ ಇಬ್ಬರು ಅಪ್ರಾಪ್ತರು ಸೇರಿ 8 ಮಂದಿ ಮೃತಪಟ್ಟಿದ್ದರು. ಅಲ್ಲದೆ 26ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದರು. ಈ ಘಟನೆ ನಡೆದ ಬೆನ್ನಲ್ಲೇ ಜಮ್ಮು- ಕಾಶ್ಮೀರದಲ್ಲಿ ಅದೇ ಮಾದರಿಯಲ್ಲಿ ಬಸ್ ಅವಗಢ ಸಂಭವಿಸಿದೆ.