-->
ಮಂಗಳೂರು: ಭಯೋತ್ಪಾದನಾ ಕೃತ್ಯಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ - ದ.ಕ.ಜಿಲ್ಲೆಯ 16 ಕಡೆಗಳಲ್ಲಿ ಎನ್ಐಎ ದಾಳಿ

ಮಂಗಳೂರು: ಭಯೋತ್ಪಾದನಾ ಕೃತ್ಯಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ - ದ.ಕ.ಜಿಲ್ಲೆಯ 16 ಕಡೆಗಳಲ್ಲಿ ಎನ್ಐಎ ದಾಳಿ


ಮಂಗಳೂರು: ಭಯೋತ್ಪಾದನಾ ಕೃತ್ಯಗಳಿಗೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆಯ ಆರೋಪದ ಮೇಲೆ ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ ಎನ್ ಐ ಎ ದಾಳಿ‌ ನಡೆದಿದೆ.  ಬೆಳ್ತಂಗಡಿ, ಪುತ್ತೂರು, ಬಂಟ್ವಾಳ ತಾಲೂಕುಗಳ 16 ಕಡೆಗಳಲ್ಲಿ ಎನ್ಐಎ ಅಧಿಕಾರಿಗಳು ದಾಳಿ‌ನಡೆಸಿದ್ದಾರೆ‌.

ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆದು ಎನ್ಐಎ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ. ದಕ್ಷಿಣ ಭಾರತದ ಪಿಎಫ್ಐ ಹವಾಲಾ ಹಣದ ಜಾಲವನ್ನು ಎನ್ಐಎ ಅಧಿಕಾರಿಗಳು ಭೇದಿಸುತ್ತಿದ್ದಾರೆ. ಈ ಮೂಲಕ ಭಾರತದಲ್ಲಿ ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದ್ದ ಹವಾಲಾ ನೆಟ್ವರ್ಕ್ ಜಾಲವನ್ನು ಪತ್ತೆ ಮಾಡುತ್ತಿದ್ದಾರೆ.

ಬಿಹಾರದ  ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪ್ರಧಾನಿ ಮೋದಿಯವರ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಿದ್ದ ಫುಲ್ವಾರಿ ಶರೀಫ್ ಪ್ರಕರಣದ ಜಾಡು ಹಿಡಿದು ಎನ್ಐಎ ಅಧಿಕಾರಿಗಳ ತಂಡವು ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸಿದೆ. ಇತ್ತೀಚೆಗೆ ಇದೇ ಪ್ರಕರಣಕ್ಕೆ ಸಂಬಂಧಪಟ್ಟಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದ ಎನ್ಐಎ ಅಧಿಕಾರಿಗಳು ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜಿಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ NIA ಅಧಿಕಾರಿಗಳು ಬಂಧಿಸಿದ್ದರು.

ಅಲ್ಲದೆ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನು ಎನ್ಐಎ ಅಧಿಕಾರಿಗಳು ಬಂಧಿಸಿದ್ದರು. ದಾಳಿಯ ವೇಳೆ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂ. ವಹಿವಾಟು ನಡೆಸಿದ್ದ ಬಗ್ಗೆ ದಾಖಲೆಗಳನ್ನು ಎನ್ಐಎ ಅಧಿಕಾರಿಗಳು ಪತ್ತೆಹಚ್ಚಿದ್ದರು.

Ads on article

Advertise in articles 1

advertising articles 2

Advertise under the article