-->
17 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ: ವೀಡಿಯೋ ಹರಿಯಬಿಟ್ಟ ಕಾಮುಕರು

17 ವರ್ಷದ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ: ವೀಡಿಯೋ ಹರಿಯಬಿಟ್ಟ ಕಾಮುಕರು


ವಾರಣಾಸಿ: 17 ವರ್ಷದ ಬಾಲಕಿಯನ್ನು ಅಪಹರಿಸಿರುವ ನಾಲ್ವರು ಕಾಮುಕರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರಪ್ರದೇಶದ ವಾರಣಾಸಿಯಲ್ಲಿ ನಡೆದಿದೆ. ಅಲ್ಲದೆ ಅತ್ಯಾಚಾರ ಕೃತ್ಯದ ವೀಡಿಯೋ ಮಾಡಿ ಹರಿಯಬಿಟ್ಟಿದ್ದಾರೆ.

ವಾರಣಾಸಿಯ ದಶಾಶ್ವಮೇಧ ಘಾಟ್‌ನಲ್ಲಿ ಗಂಗಾ ಆರತಿಯಲ್ಲಿ ಭಾಗವಹಿಸಿ ಬಾಲಕಿ ಮನೆಗೆ ವಾಪಾಸ್ಸಾಗುತ್ತಿದ್ದಳು. ಈ ವೇಳೆ ನಾಲ್ವರು ಯುವಕರ ಗುಂಪೊಂದು ಆಕೆಯನ್ನು ಅಪಹರಿಸಿದೆ‌. ಆ ಬಳಿಕ ಆಕೆಯ ಮೇಲೆ ಅಮಾನುಷವಾಗಿ ಅತ್ಯಾಚಾರವೆಸಗಿ ವೀಡಿಯೋ ಮಾಡಿ ಹರಿಬಿಟ್ಟಿದ್ದಾರೆ.

ಮೇ 19ರಂದು ನಡೆದ ಕೃತ್ಯದ ವೀಡಿಯೋ ಎಲ್ಲೆಡೆ ವೈರಲ್ ಆದ ಬಳಿಕ ಬಾಲಕಿಯ ಸಂಬಂಧಿಕರಿಗೆ ಹಾಗೂ ಕುಟುಂಬದವರಿಗೆ ತಿಳಿದು ಬಂದಿದೆ. ಈ ಕುರಿತು ಎಫ್‌ಐಆರ್ ದಾಖಲಿಸಿರುವ ಪೊಲೀಸರು ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

Ads on article

Advertise in articles 1

advertising articles 2

Advertise under the article