ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿಗೆ 4, ಕಾಂಗ್ರೆಸ್ 2 ? ಎರಡು ಕ್ಷೇತ್ರದಲ್ಲಿ 50-50
Wednesday, May 10, 2023
ಮಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಮುಕ್ತಾಯ ಕಾಣುತ್ತಿದ್ದಂತೆ ಚುನಾವಣೆಯಲ್ಲಿ ಅಭ್ಯರ್ಥಿಗಳು ಗೆಲ್ಲುವ ಬಗ್ಗೆ ಲೆಕ್ಕಾಚಾರಗಳು ಆರಂಭವಾಗಿದೆ.
ದಕ್ಷಿಣ ಕನ್ನಡ ಜಿಲ್ಲೆಯ ಎಂಟು ಕ್ಷೇತ್ರಗಳ ಪೈಕಿ 4 ಸ್ಥಾನದಲ್ಲಿ ಬಿಜೆಪಿ, 2 ಸ್ಥಾನದಲ್ಲಿ ಕಾಂಗ್ರೆಸ್ ಗೆಲ್ಲುವುದು ಬಹುತೇಕ ಖಚಿತ ಎಂದು ಹೇಳಲಾಗಿದೆ. ಇನ್ನೂ ಎರಡು ಕ್ಷೇತ್ರದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಸಮಾನ ಹೋರಾಟ ಮಾಡುತ್ತಿದ್ದು ಎರಡು ಪಕ್ಷಗಳು ಗೆಲ್ಲುವ ಸನಿಹದಲ್ಲಿ ಇದೆ. ಈ ಕಾರಣದಿಂದ ಈ ಕ್ಷೇತ್ರಗಳನ್ನು 50-50 ಎಂದು ಗುರುತಿಸಲಾಗಿದೆ.
ಬಿಜೆಪಿ ಗೆಲ್ಲಬಹುದಾದ ಕ್ಷೇತ್ರಗಳು
ಮಂಗಳೂರು ದಕ್ಷಿಣ:
ಮಂಗಳೂರು ದಕ್ಷಿಣ ಕ್ಷೇತ್ರ ಬಿಜೆಪಿ ಗೆಲ್ಲುವ ಕ್ಷೇತ್ರ ಎಂದು ಹೇಳಲಾಗುತ್ತಿದೆ. ಮಂಗಳೂರು ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜೆ ಆರ್ ಲೋಬೋ ಮತ್ತು ಬಿಜೆಪಿ ಅಭ್ಯರ್ಥಿ ವೇದವ್ಯಾಸ ಕಾಮತ್ ನಡುವೆ ಸ್ಪರ್ಧೆ ಇದೆ. ಈ ಎರಡು ಅಭ್ಯರ್ಥಿಗಳ ನಡುವೆ ಸ್ಪರ್ಧೆ ಇದ್ದರೂ ವೇದವ್ಯಾಸ ಕಾಮತ್ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ.
ಮಂಗಳೂರು ಉತ್ತರ :
ಮಂಗಳೂರು ಉತ್ತರ ಕ್ಷೇತ್ರ ಬಿಜೆಪಿ ಗೆಲ್ಲುವ ಕ್ಷೇತ್ರ ಎಂದು ಹೇಳಲಾಗುತ್ತಿದೆ. ಮಂಗಳೂರು ಉತ್ತರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಇನಾಯತ್ ಆಲಿ ಮತ್ತು ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ನಡುವೆ ಪ್ರಬಲ ಸ್ಪರ್ಧೆ ಇದೆ. ಮಾಜಿ ಶಾಸಕ ಮೊಯಿದಿನ್‌ಬಾವ ಜೆ ಡಿಎಸ್ ನಿಂದ ಸ್ಪರ್ಧಿಸುತ್ತಿದ್ದು ಅವರು ತೆಗೆದುಕೊಳ್ಳುವ ಮತಗಳು ಕಾಂಗ್ರೆಸ್ ಮೇಲೆ ಪರಿಣಾಮ ಬೀರಲಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ
ಮೂಡಬಿದಿರೆ;
ಮೂಡಬಿದಿರೆ ಕ್ಷೇತ್ರವನ್ನು ಬಿಜೆಪಿ ಗೆಲ್ಲಲಿದೆ ಎಂದು ಹೇಳಲಾಗಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಉಮನಾಥ ಕೋಟ್ಯಾನ್ ಮತ್ತು ಕಾಂಗ್ರೆಸ್ ಅಭ್ಯರ್ಥಿ ಮಿಥುನ್ ರೈ ನಡುವೆ ಪ್ರಬಲ ಸ್ಪರ್ಧೆ ಇದೆ. ಮಿಥುನ್ ರೈ ಅವರ ಸ್ಪರ್ಧೆಯಿಂದ ಕಾಂಗ್ರೆಸ್ ಬಲ ಹೆಚ್ಚಾಗುವುದಾದರೂ ಗೆಲ್ಲುವ ಸಾಧ್ಯತೆ ಕಡಿಮೆ. ಈ ಕ್ಷೇತ್ರದಲ್ಲಿ ಬಿಜೆಪಿ ಗೆಲ್ಲುವ ಸಾಧ್ಯತೆ ಹೆಚ್ಚಿದೆ.
ಸುಳ್ಯ:
ಬಿಜೆಪಿಯ ಬಲಿಷ್ಠ ಕ್ಷೇತ್ರಗಳಲ್ಲಿ ಒಂದಾದ ಸುಳ್ಯ ಕ್ಷೇತ್ರದಲ್ಲೂ ಬಿಜೆಪಿ ನಿರಾಯಾಸವಾಗಿ ಗೆಲ್ಲಲಿದೆ ಎಂದು ಹೇಳಲಾಗುತ್ತಿದೆ. ಈ ಕ್ಷೇತ್ರದಲ್ಲಿ ಬಿಜೆಪಿ ಯಿಂದ ಭಾಗೀರಥಿ ಮುರುಳ್ಯ ಮತ್ತು ಕಾಂಗ್ರೆಸ್ ನಿಂದ ಕೃಷ್ಣಪ್ಪ ಸ್ಪರ್ಧಿಸುತ್ತಿದ್ದಾರೆ. ಅಂಗಾರ ರಿಗೆ ಬಿಜೆಪಿ ಟಿಕೆಟ್ ಈ ಬಾರಿ ಕೈ ತಪ್ಪಿದ್ದು, ಭಾಗೀರಥಿ ಮುರುಳ್ಯ ಅವರಿಗೆ ಸಿಕ್ಕಿದೆ.ಭಾಗೀರಥಿ ಮುರುಳ್ಯ ಮೊದಲಬಾರಿಗೆ ಶಾಸಕರಾಗುವ ಸಾಧ್ಯತೆ ಹೆಚ್ಚಿದೆ
ಕಾಂಗ್ರೆಸ್ ಗೆಲ್ಲಬಹುದಾದ ಕ್ಷೇತ್ರಗಳು;
ಮಂಗಳೂರು: ಮಂಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ನಿರಾಯಾಸವಾಗಿ ಗೆಲ್ಲಲಿದೆ. ಇಲ್ಲಿ ಕಾಂಗ್ರೆಸ್ ನಿಂದ ಯು ಟಿ ಖಾದರ್ ಮತ್ತು ಬಿಜೆಪಿ ಯಿಂದ ಸತೀಶ್ ಕುಂಪಲ ಸ್ಪರ್ಧಿಸುತ್ತಿದ್ದಾರೆ. ಕಾಂಗ್ರೆಸ್ ನ ಕೋಟೆಯಾಗಿರುವ ಮಂಗಳೂರು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಅಸಾಧ್ಯ ಎಂಬಂತಿದೆ.ಈ ಬಾರಿಯೂ ಖಾದರ್ ಗೆಲ್ಲುವ ಸಾಧ್ಯತೆ ಹೆಚ್ಚಿದೆ.
ಪುತ್ತೂರು: ಈ ಬಾರಿ ಕಾಂಗ್ರೆಸ್ ಗೆಲ್ಲುವ ಕ್ಷೇತ್ರದಲ್ಲಿ ಪುತ್ತೂರು ಕೂಡ ಒಂದು ಎಂದು ಹೇಳಲಾಗಿದೆ. ಪುತ್ತೂರಿನ ರಾಜಕೀಯದಲ್ಲಿ ಆಗಿರುವ ಕೆಲವೊಂದು ಬದಲಾವಣೆ ಗಳಿಂದ ಪುತ್ತೂರಿನಲ್ಲಿ ಕಾಂಗ್ರೆಸ್ ಗೆಲ್ಲುವ ಸಾಧ್ಯತೆ ಹೆಚ್ಚು.ಈ ಕ್ಷೇತ್ರದಲ್ಲಿ ಬಿಜೆಪಿಯಿಂದ ಆಶಾ ತಿಮ್ಮಪ್ಪ ಮತ್ತು ಕಾಂಗ್ರೆಸ್ ನಿಂದ ಅಶೋಕ್ ಕುಮಾರ್ ರೈ ಸ್ಪರ್ಧಿಸುತ್ತಿದ್ದಾರೆ. ಇದರ ಜೊತೆಗೆ ಈ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಅರುಣ್ ಪುತ್ತಿಲ ಸ್ಪರ್ಧಿಸುತ್ತಿದ್ದಾರೆ.ಅರುಣ್ ಪುತ್ತಿಲ ಸ್ಪರ್ಧೆಯ ಕಾರಣಕ್ಕೆ ಕಾಂಗ್ರೆಸ್ ಗೆಲುವಿನ ಸಾಧ್ಯತೆ ಹೆಚ್ಚಾಗಿದೆ.
50-50
ಬಂಟ್ವಾಳ:
ಈ ಬಾರಿ ಬಂಟ್ವಾಳ ಕ್ಚೇತ್ರವನ್ನು ಇವರೆ ಗೆಲ್ಲುತ್ತಾರೆ ಎಂದು ಅಂದಾಜಿಸಲು ಸಾಧ್ಯವಾಗುತ್ತಿಲ್ಲ. ಈ ಕ್ಷೇತ್ರದಲ್ಲಿ ಬಿಜೆಪಿ ಯಿಂದ ರಾಜೇಶ್ ನಾಯ್ಕ್ ಕಾಂಗ್ರೆಸ್ ನಿಂದ ರಮಾನಾಥ ರೈ ಸ್ಪರ್ಧಿಸುತ್ತಿದ್ದಾರೆ. ಇಬ್ಬರ ನಡುವೆ ಪ್ರಬಲ ಪೈಪೋಟಿ ಇದೆ. ಇಬ್ಬರ ನಡುವೆ ಇರುವ ಸ್ಪರ್ಧೆಯಿಂದ ಯಾರೇ ಗೆದ್ದರೂ ಗೆಲುವಿನ ಅಂತರ ಕಡಿಮೆ ಇರುತ್ತದೆ
ಬೆಳ್ತಂಗಡಿ:
ಚುನಾವಣೆ ಪ್ರಕ್ರಿಯೆ ಆರಂಭವಾಗುವವರೆಗೂ ಬೆಳ್ತಂಗಡಿ ಬಿಜೆಪಿಯ ಗೆಲುವು ನಿರಾಯಾಸ ಎಂದು ಹೇಳಲಾಗಿತ್ತು. ಆದರೆ ಬದಲಾದ ರಾಜಕೀಯ ಸಂದರ್ಭದಲ್ಲಿ ಬೆಳ್ತಂಗಡಿ ಯಲ್ಲಿ ಈ ಬಾರಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸ್ಪರ್ಧೆ ಹೆಚ್ಚಿದೆ. ಕಾಂಗ್ರೆಸ್ ನಿಂದ ರಕ್ಷಿತ್ ಶಿವರಾಮ ಮತ್ತು ಬಿಜೆಪಿ ಯಿಂದ ಸ್ಪರ್ಧಿಸುತ್ತಿರುವ ಹರೀಶ್ ಪೂಂಜಾ ನಡುವೆ ಪ್ರಬಲ ಪೈಪೋಟಿ ಇದೆ.ಇಬ್ಬರ ನಡುವೆ ಇರುವ ಸ್ಪರ್ಧೆಯಿಂದ ಯಾರೇ ಗೆದ್ದರೂ ಗೆಲುವಿನ ಅಂತರ ಕಡಿಮೆ ಇರುತ್ತದೆ