-->
ಬಸ್ - ಕಾರು ನಡುವೆ ಭೀಕರ ಅಪಘಾತ : ಐವರ ದಾರುಣ ಸಾವು, ಮೂವರಿಗೆ ಗಂಭೀರ ಗಾಯ

ಬಸ್ - ಕಾರು ನಡುವೆ ಭೀಕರ ಅಪಘಾತ : ಐವರ ದಾರುಣ ಸಾವು, ಮೂವರಿಗೆ ಗಂಭೀರ ಗಾಯ


ಮೈಸೂರು: ಬಸ್ ಹಾಗೂ ಕಾರು ನಡುವೆ ಸಂಭವಿಸಿರುವ ಭೀಕರ ಅಪಘಾತದಲ್ಲಿ ಐವರು ದಾರುಣವಾಗಿ ಮೃತಪಟ್ಟಿರುವ ಘಟನೆ ಟಿ.ನರಸೀಪುರ ತಾಲೂಕಿನ ಕುರುಬೂರು ಗ್ರಾಮದಲ್ಲಿ ನಡೆದಿದೆ.

ಕೊಳ್ಳೇಗಾಲ - ಟಿ.ನರಸೀಪುರ ಮುಖ್ಯರಸ್ತೆಯಲ್ಲಿ ಇನೋವಾ ಕಾರಿಗೆ ಖಾಸಗಿ ಬಸ್ ಢಿಕ್ಕಿ ಹೊಡೆದಿದೆ. ಪರಿಣಾಮ ಈ ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಲ್ಲದೆ ಕೆಲವರಿಗೆ ಗಂಭೀರ ಗಾಯಗಳಾಗಿದೆ. ಮೃತಪಟ್ಟವರು ಬಳ್ಳಾರಿ ಮೂಲದವರಾಗಿದ್ದಾರೆ. ಪ್ರವಾಸಕ್ಕೆಂದು ಬಂದಿರುವ ಇವರು ವಾಪಸ್ ತೆರಳುವಾಗ ಈ ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರಿನಲ್ಲಿ ಸಿಲುಕಿದ್ದ ಮಗು ಸೇರಿದಂತೆ ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದಾರೆ.

Ads on article

Advertise in articles 1

advertising articles 2

Advertise under the article