-->
ಮಂಗಳೂರಿನಲ್ಲಿ BJP ಗೆ ಶಾಕ್- ಬಿಜೆಪಿ ಮಾಜಿ ನಗರಾಧ್ಯಕ್ಷ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ

ಮಂಗಳೂರಿನಲ್ಲಿ BJP ಗೆ ಶಾಕ್- ಬಿಜೆಪಿ ಮಾಜಿ ನಗರಾಧ್ಯಕ್ಷ ಸತೀಶ್ ಪ್ರಭು ಕಾಂಗ್ರೆಸ್ ಸೇರ್ಪಡೆ

 


ಮಂಗಳೂರು; ವಿಧಾನಸಭಾ ಚುನಾವಣೆಯ ಪ್ರಚಾರದ ಮುಕ್ತಾಯದ ಹಂತದಲ್ಲಿ ಕಾಂಗ್ರೆಸ್ ಬಿಜೆಪಿಗೆ ಶಾಕ್ ನೀಡಿದೆ.


ಬಿಜೆಪಿಯ ಮಾಜಿ‌ನಗರಾಧ್ಯಕ್ಷ ಸತೀಶ್ ಪ್ರಭು ಇಂದು ನಗರದ ಮಲ್ಲಿಕಟ್ಟೆಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ  ಕಾಂಗ್ರೆಸ್ ಪಕ್ಷದ ಕೈ ಹಿಡಿದಿದ್ದಾರೆ. ಸತೀಶ್ ಪ್ರಭು ಮಂಗಳೂರು ನಗರ ದಕ್ಷಿಣ ಕ್ಷೇತ್ರದ ಪ್ರಭಾವಿಯಾಗಿದ್ದು, ನಗರಕ್ಕೆ ಮೊದಲು ನರೇಂದ್ರ ಮೋದಿಯನ್ನು ಕರೆ ತರುವಲ್ಲಿ ಕೆಲಸ ಮಾಡಿದ್ದರು.





ಸತೀಶ್ ಪ್ರಭು ಜೊತೆಗೆ ರಜತ್  ಆರ್ ಕಾಮತ್, ದೀಕ್ಷಾ ಕಾಮತ್ , ಸಂತೋಷ್ ಶೆಟ್ಟಿ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.


ವಿಪಕ್ಷ ಉಪನಾಯಕ ಬಿ ಕೆ ಹರಿಪ್ರಸಾದ್, ಕೇರಳ ಶಾಸಕ ರೋಜಿ ಜಾನ್, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮಾಜಿ ಶಾಸಕ ಜೆ ಆರ್ ಲೋಬೋ ಅವರು ಸತೀಶ್ ಪ್ರಭು ಮತ್ತು ತಂಡವನ್ನು ಕಾಂಗ್ರೆಸ್ ಪಕ್ಷಕ್ಕೆ ಬರಮಾಡಿಕೊಂಡರು.



ಈ ಸಂದರ್ಭ ಬಿ.ಕೆ. ಹರಿಪ್ರಸಾದ್ ಮಾತನಾಡಿ, ಭಾರತೀಯ ಜನತಾ ಪಾರ್ಟಿ ಹಾಗೂ ನಾನಾ ಸಂಘಟನೆಯಲ್ಲಿ ಸುಮಾರು 3 ದಶಕಗಳ ಕಾಲ ಸೇವೆ ಮಾಡಿದ ಪ್ರಮುಖ ನಾಯಕರು ಕಾಂಗ್ರೆಸ್ ಸೇರ್ಪಡೆಯಾಗಿರುವುದು ಪಕ್ಷಕ್ಕೆ ಮತ್ತಷ್ಟು ಬಲ ಬಂದಂತಾಗಿದೆ. ಬಿಜೆಪಿಯಲ್ಲಿ ಪಕ್ಷಾಂತರ ಸುನಾಮಿ ಆರಂಭವಾಗಿದ್ದು, ಈವರೆಗೆ ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ ಸೇರಿದಂತೆ 47ಮಂದಿ ಹಿರಿಯ ನಾಯಕರು ಹಾಗೂ 6ಮಂದಿ ವಿಧಾನ ಪರಿಷತ್ ಸದಸ್ಯರು ಕಾಂಗ್ರೆಸ್ ಪಕ್ಷ ಸೇರ್ಪಡೆ ಮಾಡಿದ್ದಾರೆ. ಇದರಿಂದ ಬಿಜೆಪಿ ಮುಳುಗುತ್ತಿರುವ ಹಡಗಾಗಿದ್ದು, ಮುಂದಿನ ದಿನಗಳಲ್ಲಿ ಕಾಂಗ್ರೆಸ್ ಈ ರಾಜ್ಯದಲ್ಲಿ ಆಡಳಿತ ನಡೆಸಲಿದೆ ಎಂದರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ರಥಬೀದಿ ವೆಂಕಟರಮಣ ದೇವಳದ ಟ್ರಸ್ಟಿ ಹಾಗೂ ಬಿಜೆಪಿ ಮುಖಂಡ ಸತೀಶ್ ಪ್ರಭು ಅವರು 30 ವರ್ಷಗಳಿಂದ ರಾಷ್ಟ್ರೀಯ ಸ್ವಯಂಸೇವಕ ಸಂಘದಲ್ಲಿ, ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಬಿಜೆಪಿ ಯುವಮೋರ್ಚಾ, ದ.ಕ. ಜಿಲ್ಲಾ ಬಿಜೆಪಿಯಲ್ಲಿ ಜವಾಬ್ದಾರಿ ವಹಿಸಿಕೊಂಡವರು. ಇಂತಹ ನಾಯಕರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಹೆಮ್ಮೆಯೆನಿಸುತ್ತಿದೆ. ಇವರ ಜತೆ ಸಂತೋಷ್ ಶೆಟ್ಟಿ, ರಾಜೇಶ್ ಕಾಮತ್, ರಜತಾ ಆರ್. ಕಾಮತ್ ಹಾಗೂ ದೀಕ್ಷಾ ಕಾಮತ್ ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ ಎಂದರು.

ಜನಹಿತ ಸಾಧನೆಗೆ ಕಾಂಗ್ರೆಸ್ ಸೇರ್ಪಡೆ: ನಾನು ಸುಮಾರು ವರ್ಷಗಳಿಂದ ಸಂಘಪರಿವಾರ, ಬಿಜೆಪಿ ಜತೆ ಗುರುತಿಸಿಕೊಂಡಿದ್ದು, ನಾನಾ ಜವಬ್ದಾರಿ ವಹಿಸಿಕೊಂಡಿದ್ದೆ. ಆದರೆ ಬಿಜೆಪಿಯಲ್ಲಿ ಇತ್ತೀಚಿನ ದಿನಗಳಲ್ಲಿ ಜನಹಿತ ಸಾಧನೆ ಗೌಣವಾಗುತ್ತಿದ್ದು, ಇದರಿಂದ ಬೇಸತ್ತು ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ ಎಂದು ಸತೀಶ್ ಪ್ರಭು ಹೇಳಿದರು.

ನಾನು ಯಾವುದೇ ಅಧಿಕಾರ, ಹುದ್ದೆಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿಲ್ಲ. ಈ ಜಿಲ್ಲೆಯಲ್ಲಿ  ನಮ್ಮ ಹಿರಿಯರು ಕಾಂಗ್ರೆಸ್‌ನಲ್ಲಿ ಅನೇಕ ಸಾಧನೆಗಳನ್ನು ಮಾಡಿದ್ದು, ಆ ನಿಟ್ಟಿನಲ್ಲಿ ಗತವೈಭವ ಮರಳಿ ತರಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದರು.

ಕಾರ್ಯಕ್ರಮದಲ್ಲಿ ಎಐಸಿಸಿ ಕಾರ್ಯದರ್ಶಿ ರೋಜಿ ಜಾನ್, ಕಾಂಗ್ರೆಸ್ ಮುಖಂಡರಾದ ಪಿ.ವಿ. ಮೋಹನ್, ಲಾವಣ್ಯ ಬಲ್ಲಾಳ್, ಕಾಂಗ್ರೆಸ್ ಅಭ್ಯರ್ಥಿ ಜೆ.ಆರ್. ಲೋಬೋ, ಕಾರ್ಪೊರೇಟರ್‌ಗಳಾದ ಶಶಿಧರ್ ಹೆಗ್ಡೆ, ಪ್ರಕಾಶ್ ಸಾಲ್ಯಾನ್, ನವೀನ್ ಡಿಸೋಜ, ದ.ಕ. ಯುವಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ್, ತೇಜಸ್ವಿರಾಜ್, ಡೆನ್ನಿಸ್ ಡಿಸಿಲ್ವಾ ಉಪಸ್ಥಿತರಿದ್ದರು.




Ads on article

Advertise in articles 1

advertising articles 2

Advertise under the article