ಸಿದ್ದರಾಮಯ್ಯಗೆ ಮುಖ್ಯಮಂತ್ರಿ ಪಟ್ಟ- ಡಿಕೆಶಿಗೆ DCM ?
Wednesday, May 17, 2023
ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಯಾರು ಎಂಬ ವಿಚಾರ ಕೊನೆಗೂ ಇತ್ಯರ್ಥವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂತನ ಮುಖ್ಯಮಂತ್ರಿಯಾಗಲಿದ್ದು, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಉಪಮುಖ್ಯಮಂತ್ರಿಯಾಗಲಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯಷ್ಟೆ ಬಾಕಿಯುಳಿದಿದೆ.
ಮೇಋ 13 ರಂದು ಮತ ಎಣಿಕೆ ಮುಕ್ತಾಯವಾದ ಬಳಿಕ ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಗಾದಿಗೆ ಬಾರಿ ಪೈಪೋಟಿ ನಡೆದಿತ್ತು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಹೈಕಮಾಂಡ್ ಮೇಲೆ ತೀವ್ರ ಒತ್ತಡವನ್ನೇರಿದ್ದರು.
ಕಳೆದ ನಾಲ್ಕು ದಿನಗಳಿಂದ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆಗೆ ಕಾಂಗ್ರೆಸ್ ಹೈಕಮಾಂಡ್ ಕಸರತ್ತು ನಡೆಸಿದ್ದು, ಇಂದು ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿಯಾಗಿ, ಡಿ ಕೆ ಶಿವಕುಮಾರ್ ಅವರನ್ನು ಉಪಮುಖ್ಯಮಂತ್ರಿಯಾಗಿ ನೇಮಕ ಮಾಡಿದೆ. ಕೆಪಿಸಿಸಿ ಅಧ್ಯಕ್ಷರಾಗಿಯು ಅವರು ಮುಂದುವರಿಯಲಿದ್ದಾರೆ ಎಂದು ತಿಳಿದುಬಂದಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ನ ಅಧಿಕೃತ ಘೋಷಣೆಯನ್ನು ನಿರೀಕ್ಷಿಸಲಾಗುತ್ತಿದೆ.
ಸಿದ್ದರಾಮಯ್ಯು ಅವರನ್ನು ಮುಖ್ಯಮಂತ್ರಿ ಘೋಷಿಸಿರುವ ಬಗ್ಗೆ ಕೆಪಿಸಿಸಿ ಮಹಿಳಾ ಘಟನಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಅವರು ಮಾಧ್ಯಮಗಳಿಗೆ ಅಧಿಕೃತ ಪಡಿಸಿದ್ದಾರೆ