ಬೆಳ್ತಂಗಡಿ: ಸಾರ್ವಜನಿಕ ಕುಡಿಯುವ ನೀರಿನಲ್ಲಿ ಅಪರಿಚಿತ ಮೃತದೇಹ ಪತ್ತೆ
Sunday, May 14, 2023
ಬೆಳ್ತಂಗಡಿ: ಸಾರ್ವಜನಿಕ ನೀರಿನ ಟ್ಯಾಂಕ್ ನಲ್ಲಿ ಕೊಳೆತ ಮೃತದೇಹವೊಂದು ಪತ್ತೆಯಾದ ಘಟನೆ ಬೆಳ್ತಂಗಡಿ ತಾಲೂಕಿನ ಕಳೆಂಜ ಗ್ರಾಮದ ಕಾಯರ್ತಡ್ಕ ಬಳಿ ನಡೆದಿದೆ. ಕುಡಿಯುವ ನೀರು ದುರ್ವಾಸನೆಯುಕ್ತವಾಗಿತ್ತು. ಆದ್ದರಿಂದ ಪರಿಶೀಲನೆ ಮಾಡಿದಾಗ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕ್‌ನಲ್ಲಿ ಮೃತದೇಹ ಪತ್ತೆಯಾಗಿದೆ.
ಈ ಟ್ಯಾಂಕ್‌ನಿಂದ ಶನಿವಾರ ಬೆಳಗ್ಗೆ ಸ್ಥಳೀಯ ಪರಿಸರದಲ್ಲಿ ನೀರು ಪೂರೈಕೆ ಮಾಡಲಾಗಿತ್ತು. ಆದರೆ ನೀರು ದುರ್ವಾಸನೆ ಯುಕ್ತವಾಗುತ್ತಿರುವುದನ್ನು ಸಾರ್ವಜನಿಕರು ಪಂಚಾಯತ್ ಗಮನಕ್ಕೆ ತಂದಿದ್ದಾರೆ. ಈ ಸಂದರ್ಭ ಪರಿಶೀಲನೆ ನಡೆಸಿದಾಗ ಟ್ಯಾಂಕ್ ನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿರುವುದು ಕಂಡುಬಂದಿದೆ.
ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಾಯರ್ತಡ್ಕದ ವೈನ್ ಶಾಪ್ ಒಂದರಲ್ಲಿ ಕೆಲಸಕ್ಕಿದ್ದ ಉತ್ತರ ಭಾರತದ ವ್ಯಕ್ತಿ ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದಾನೆ. ಆತನದ್ದೇ ಮೃತದೇಹವೇ ಅನುಮಾನ ವ್ಯಕ್ತವಾಗಿದೆ. ಈ ಬಗ್ಗೆ ಧರ್ಮಸ್ಥಳ ಠಾಣಾ ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.