ಮಂಗಳೂರು: ನರ್ಸಿಂಗ್ ವಿದ್ಯಾರ್ಥಿನಿ ನಾಪತ್ತೆ
Saturday, May 20, 2023
ಮಂಗಳೂರು: ನಗರದ ಕೊಲಾಸೋ ಆಸ್ಪತ್ರೆಯಲ್ಲಿ ಪ್ರಥಮ ವರ್ಷದ ನರ್ಸಿಂಗ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ಮೇ 15ರಿಂದ ನಾಪತ್ತೆಯಾಗಿದ್ದಾರೆಂದು ಮಂಗಳೂರು ಪೂರ್ವ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅಸ್ಮಾ ಬಾನು(18) ನಾಪತ್ತೆಯಾಗಿರುವ ವಿದ್ಯಾರ್ಥಿನಿ.
ಮೇ 15ರಂದು ಬೆಳಗ್ಗೆ 9.15ರ ಸುಮಾರಿಗೆ ಮನೆಯಿಂದ ಕೊಲಾಸೋ ಆಸ್ಪತ್ರೆಗೆ ಹೋಗಿ ಬರುತ್ತೇನೆಂದು ಅಸ್ಮಾ ಬಾನು ತೆರಳಿದ್ದರು. ಆದರೆ ಆ ಬಳಿಕ ಅವರು ಮನೆಗೆ ಮರಳಿ ಬರಲಿಲ್ಲ. ಕನ್ನಡ, ಇಂಗ್ಲಿಷ್, ಹಿಂದಿ ಭಾಷೆ ಮಾತನಾಡುತ್ತಾರೆ. ಅಸ್ಮಾ ಬಾನು ನಾಪತ್ತೆಯಾದ್ದಾರೆಂದು ತಂದೆ ಮಹಮ್ಮದ್ ಖಾಲಿಕ್ ಮಂಗಳೂರು ಪೂರ್ವ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಾಣೆಯಾದವರ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ಮಂಗಳೂರು ಪೂರ್ವ ಪೊಲೀಸ್ ಠಾಣೆ ದೂರವಾಣಿ ಸಂಖ್ಯೆ 0824-2220520 ಅಥವಾ ಜಿಲ್ಲಾ ಕಂಟ್ರೋಲ್ ರೂಂ 2220800, 2220801 ಅನ್ನು ಸಂಪರ್ಕಿಸುವಂತೆ ಪೊಲೀಸ್ ಪ್ರಕಟನೆ ತಿಳಿಸಿದೆ.