ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಹೆಮ್ಮೆಯ ಕಲೆ: ಪ್ರಭಾಕರ ಜೋಷಿ
ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಹೆಮ್ಮೆಯ ಕಲೆ: ಪ್ರಭಾಕರ ಜೋಷಿ
ಯಕ್ಷಧ್ರುವ ಪಟ್ಲ ಸಂಭ್ರಮ: ಹೈಸ್ಕೂಲ್, ಕಾಲೇಜು ವಿದ್ಯಾರ್ಥಿಗಳ ಯಕ್ಷ ಸ್ಫರ್ಧೆ
-ಭಾರತದ ರಂಗಭೂಮಿಯಲ್ಲಿ ಯಕ್ಷಗಾನ ಒಂದು ಹೆಮ್ಮೆಯ ಕಲೆ. ಯಕ್ಷಗಾನ ಸಂಶೋಧನೆಯ ಮೂಲಕ ನೋಡಿದಾಗಲೂ ಯಕ್ಷಗಾನ ವಿಶ್ವಪ್ರಸಿದ್ದಿಯನ್ನು ಪಡೆದ ಕಲೆಯಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಹೊಸ ಭಾಷ್ಯೆಯನ್ನು ಬರೆದಿದೆ ಎಂದು ಹಿರಿಯ ಯಕ್ಷಗಾನ ವಿದ್ವಾಂಸ ಪ್ರಭಾಕರ ಜೋಷಿ ತಿಳಿಸಿದರು.
-ಅಡ್ಯಾರ್ ಗಾರ್ಡನ್ ನಲ್ಲಿ ಜರಗಿದ ಯಕ್ಷಧ್ರುವ ಪಟ್ಲ ಸಂಭ್ರಮ 2023 ರ ಹೈಸ್ಕೂಲ್ ಮತ್ತು ಕಾಲೇಜು ವಿದ್ಯಾರ್ಥಿಗಳ ಯಕ್ಷಗಾನ ಸ್ಪರ್ಧೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪಟ್ಲ ಭಾಗವತರ ಜನಪ್ರಿಯತೆ ಮತ್ತು ಜವಾಬ್ದಾರಿ ಏನು ಎಂಬುದನ್ನು ಪಟ್ಲ ಫೌಂಡೇಶನ್ ಟ್ರಸ್ಟ್ ನ ಮೂಲಕ ತಿಳಿಯ ಬಹುದು.
-ಪ್ರಸ್ತಾವಿಕವಾಗಿ ಮಾತನಾಡಿದ ಪಟ್ಲ ಫೌಂಡೇಶನ್ ಟ್ರಸ್ಟ್ ನ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಮಾತನಾಡಿ ಯಕ್ಷಗಾನದ ಪಾರಂಪರಿಕೆ, ಸೊಗಡನ್ನು ಉಳಿಸುವ ಪ್ರಯತ್ನವೇ ಯಕ್ಷಗಾನ ಸ್ಪರ್ಧೆಯ ಉದ್ದೇಶವಾಗಿದೆ ಎಂದರು.
-ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಕಲ್ಕೂರ ಪ್ರತಿಷ್ಠಾನದ ಸ್ಥಾಪಕಾಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ, ಮಹೇಶ್ ಮೋಟರ್ಸ್ ಸಂಸ್ಥೆಯ ಮಾಲಕ ಜಯರಾಮ ಶೇಖ, ಬಹರೈನ್ - ಸೌದಿ ಘಟಕದ ಅಧ್ಯಕ್ಷ ವಿ ರಾಜೇಶ್ ಶೆಟ್ಟಿ ಉಪಸ್ಥಿತರಿದ್ದರು.
-ಟ್ರಸ್ಟ್ ನ ಪ್ರಧಾನ ಕಾರ್ಯದರ್ಶಿ ಪುರುಷೋತ್ತಮ ಭಂಡಾರಿ ಅಡ್ಯಾರ್ ಸ್ವಾಗತಿಸಿದರು. ಸಂಘಟನಾ ಕಾರ್ಯದರ್ಶಿ ಕದ್ರಿ ನವನೀತ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.
-ಕುಂಬಳೆ ಸುಂದರ ರಾವ್ ವೇದಿಕೆಯಲ್ಲಿ ಹೈಸ್ಕೂಲ್ ವಿದ್ಯಾರ್ಥಿಗಳ ಯಕ್ಷಗಾನ ಬಯಲಾಟ ಸ್ಪರ್ಧೆ ನಡೆಯಿತು. ಡಾ ಪುತ್ತೂರು ಶ್ರೀಧರ ಭಂಡಾರಿ ವೇದಿಕೆಯಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ಯಕ್ಷಗಾನ ಬಯಲಾಟ ಸ್ಪರ್ಧೆ ನಡೆಯಿತು.
ತೀರ್ಪುಗಾರರು-
*ಹೈಸ್ಕೂಲ್ ವಿಭಾಗ*
* ವಾಟೆಪಡ್ಪು ವಿಷ್ಣು ಶರ್ಮ
* ದಿವಿತ್ ಕೋಟ್ಯಾನ್
* ಆರತಿ ಪಟ್ರಮೆ
ಕಾಲೇಜು ವಿಭಾಗ-
*ಕೃಷ್ಣ ಪ್ರಕಾಶ ಉಳಿತ್ತಾಯ
*ಉಬರಡ್ಕ ಉಮೇಶ್ ಶೆಟ್ಟಿ
*ಸಂಜಯ್ ಕುಮಾರ್ ಗೋಣಿಬೀಡು