ಪುತ್ತೂರಿನಲ್ಲಿ ಚಪ್ಪಲಿ ಹಾರದ ಬ್ಯಾನರ್ ಅಳವಡಿಕೆ ಪ್ರಜರಣ: ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ ಇಬ್ಬರು ಪೊಲೀಸರು ಅಮಾನತು
Thursday, May 18, 2023
ಪುತ್ತೂರು: ಚುನಾವಣೆಯಲ್ಲಿ ಬಿಜೆಪಿ ಹಿನಾಯವಾಗಿ ಸೋಲಲು ಸದಾನಂದ ಗೌಡ ಹಾಗೂ ನಳಿನ್ ಕುಮಾರ್ ಕಟೀಲು ಅವರು ಕಾರಣವೆಂದು ಬ್ಯಾನರ್ ಅಳವಡಿಸಿ ಚಪ್ಪಲಿ ಹಾರ ಹಾಕಿರುವ ಆರೋಪಿಗಳಿಗೆ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ಮಾಡಿರುವ ಇಬ್ಬರು ಪೊಲೀಸರನ್ನು ಅಮಾನತು ಮಾಡಲಾಗಿದೆ.
ಪುತ್ತೂರು ಗ್ರಾಮಾಂತರ ಠಾಣಾ ಪೊಲೀಸ್ ಇನ್ ಸ್ಪೆಕ್ಟರ್ ಹಾ ಪೊಲೀಸ್ ಕಾನ್ ಸ್ಟೇಬಲ್ ಅವರನ್ನು ಅಮಾನತು ಮಾಡಲಾಗಿದೆ. ಅದೇ ರೀತಿ ಪುತ್ತೂರು ಡಿಸಿಪಿಯವರ ವಿರುದ್ಧ ಸೂಕ್ತ ಇಲಾಖಾ ಶಿಸ್ತು ಕ್ರಮ ಕೈಗೊಳ್ಳಲು ವರದಿಯನ್ನು ಮೇಲಾಧಿಕಾರಿಗಳಿಗೆ ಸಲ್ಲಿಸಲಾಗಿದೆ.
ಬ್ಯಾನರಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣದಲ್ಲಿ ಪುತ್ತೂರು ನಗರ ಠಾಣೆಯಲ್ಲಿ ವಿಚಾರಣೆಗೆ ಒಳಪಡಿಸಿದ ಲ ಪೊಲೀಸರು ಅವಿನಾಶ್ ನರಿಮೊಗರು ಎಂಬವರಿಗೆ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ಮಾಡಿ ಹಲ್ಲೆಗೈದಿರುವ ವಿಚಾರಕ್ಕೆ ಸಂಬಂಧಿಸಿದಂತೆ ದೂರ ಬಂದಿತ್ತು. ಅಲ್ಲದೆ ಈ ವೇಳೆ ರಾತ್ರೋರಾತ್ರಿ ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಅವರು ಠಾಣೆಯಿಂದ ಬಿಡಿಸಿಕೊಂಡು ಬಂದಿದ್ದರು. ಆದರೆ ಅವರ ತೊಡೆ, ಬೆನ್ನಿನ ಕೆಳಗಡೆ, ಪಾದದ ಅಡಿ ಭಾಗಗಳಿಗೆ ಗಂಭೀರವಾಗಿ ಗಾಯವಾಗಿ ನಡೆಡಾಲು ಸಾಧ್ಯವಾಗುತ್ತಿರಲಿಲ್ಲ. ಆದ್ದರಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದೋಗ ಪ್ರಕರಣದ ತನಿಖೆಯನ್ನು ಬಂಟ್ವಾಳ ಡಿಎಸ್ ಪಿಯವರಿಗೆ ವಹಿಸಲಾಗಿದೆ.