ನೀತಿ ಸಂಹಿತೆ ಉಲ್ಲಂಘಿಸಿ ಹಕ್ಕುಪತ್ರ ವಿತರಣೆ: ತನಿಖೆಗೆ ಸರ್ಕಾರ ಸೂಚನೆ
ನೀತಿ ಸಂಹಿತೆ ಉಲ್ಲಂಘಿಸಿ ಹಕ್ಕುಪತ್ರ ವಿತರಣೆ: ತನಿಖೆಗೆ ಸರ್ಕಾರ ಸೂಚನೆ
ರಾಜ್ಯ ವಿಧಾನ ಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಇದ್ದ ಸಂದರ್ಭದಲ್ಲಿ ರಾಜ್ಯದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಹಕ್ಕು ಪತ್ರಗಳನ್ನು ನೀಡಿರುವುದು ಈಗ ವಿವಾದಕ್ಕೀಡಾಗಿದೆ.
ನೀತಿ ಸಂಹಿತೆಯನ್ನು ಉಲ್ಲಂಘಿಸಿ ಆಗಿನ ಶಾಸಕರು ಮತ್ತು ಮುಖ್ಯಮಂತ್ರಿಗಳ ಭಾವಚಿತ್ರ ಇರುವ ಹಕ್ಕುಪತ್ರಗಳನ್ನು 10500 ಫಲಾನುಭವಿಗಳಿಗೆ ನೀಡಲಾಗಿತ್ತು ಎನ್ನಲಾಗಿದೆ. ಮುಖ್ಯಮಂತ್ರಿ ನಿವೇಶನ ಯೋಜನೆಯಡಿ ಈ ಹಕ್ಕುಪತ್ರಗಳನ್ನು ನೀಡಲಾಗಿತ್ತು.
ಮುಖ್ಯಮಂತ್ರಿ ಮತ್ತು ವಸತಿ ಸಚಿವರ ಭಾವಚಿತ್ರದ ಸಹಿತ ಹಕ್ಕುಪತ್ರ ವಿತರಿಸಬೇಕು. ಆದರೆ, ಇದನ್ನು ಚುನಾವಣೆ ಅವಧಿಯಲ್ಲಿ ವಿತರಿಸುವಂತಿಲ್ಲ ಎಂದು ಅಧಿಕಾರಿಗಳು ಸೂಚನೆ ನೀಡಿದ್ದರು. ಆದರೂ, ಕಾನೂನು ಉಲ್ಲಂಘಿಸಿ ಹಕ್ಕುಪತ್ರ ವಿತರಿಸಲಾಗಿದೆ ಎಂದು ಅಧಿಕಾರಿಗಳು ಸಚಿವರ ನೇತೃತ್ವದ ಸಭೆಯಲ್ಲಿ ದೂರು ಸಲ್ಲಿಸಿದರು.
ತಪ್ಪಿತಸ್ಥ ಅಧಿಕಾರಿಗಳು ವಿರುದ್ಧ ಕ್ರಮ ಜರುಗಿಸಿ ಎಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಇಲಾಖಾ ಅಧಿಕಾರಿಗಳಿಗೆ ಸೂಚನೆ ನೀಡಿದರು.