ರಾಜ್ಯದಲ್ಲಿ ಇನ್ನು ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ
ಬೆಂಗಳೂರು: ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಭರವಸೆ ನೀಡಿದಂತೆ
ರಾಜ್ಯದಲಲ್ಇ ಸರಕಾರಿ ಬಸ್ ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಿದೆ.
ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷವು ಐದು ಭರವಸೆಗಳನ್ನು ನಿಡಿತ್ತು. ಇದರಲ್ಲಿ ಮಹಿಳೆಯರನ್ನು ಆಕರ್ಷಿಸಲು ಸರಕಾರಿ ಬಸ್ ನಲ್ಲಿ
ಉಚಿತ ಬಸ್ ಪ್ರಯಾಣ ದ ಬಗ್ಗೆ ಯೋಜನೆಯನ್ನು ಪ್ರಕಟಿಸಿತ್ತು. ಮಂಗಳೂರಿನ ಅಡ್ಯಾರ್ ನಲ್ಲಿ ನಡೆದ ಕಾಂಗ್ರೆಸ್
ಪ್ರಚಾರ ಸಭೆಯಲ್ಲಿ ರಾಹುಲ್ ಗಾಂಧಿ ಉಚಿತ ಬಸ್ ಪ್ರಯಾಣದ 5 ನೇ ಗ್ಯಾರಂಟಿಯನ್ನು ಪ್ರಕಟಿಸಿದ್ದರು.
ಕಾಂಗ್ರೆಸ್ ಪಕ್ಷಕ್ಕೆ ಗ್ಯಾರಂಟಿ ಯೋಜನೆಯಿಂದ ಅಧಿಕಾರ ಸಿಕ್ಕಿದೆ.
ಈ ಗ್ಯಾರಂಟಿ ಯೋಜನೆಗಳನ್ನು ಇಂದು ಪ್ರಕಟಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಐದು ಗ್ಯಾರಂಟಿಗಳಿಗೆ
ಅಸ್ತು ಎನ್ನಲಾಗಿದೆ. ಅದರಂತೆ ಜೂನ್ 11 ರಿಂದ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಕಲ್ಪಿಸುವ
ಶಕ್ತಿ ಯೋಜನೆಯನ್ನು ಪ್ರಕಟಿಸಲಾಗಿದೆ.
ಈ ಬಗ್ಗೆ ಮಾತನಾಡಿರುವ ಮುಖ್ಯಮಂತ್ರಿ
ಸಿದ್ದರಾಮಯ್ಯ ಅವರು ಶಾಲಾ ವಿದ್ಯಾರ್ಥಿನಿಯರು ಸೇರಿದಂತೆ ರಾಜ್ಯದ ಎಲ್ಲಾ ವರ್ಗದ ಮಹಿಳೆಯರಿಗೆ ಎಸಿ, ಸ್ಲೀಪರ್ ಹಾಗೂ ಲಕ್ಷುರಿ ಬಸ್ ಗಳನ್ನು ಹೊರತುಪಡಿಸಿ ಇತರೆ ಎಲ್ಲಾ ಬಸ್ ಗಳಲ್ಲಿ ರಾಜ್ಯದೊಳಗೆ ಉಚಿತ ಪ್ರಯಾಣ ಸೌಲಭ್ಯ ನೀಡಲು ಇಂದು ನಡೆದ ಸಂಪುಟ ಸಭೆಯಲ್ಲಿ ತೀರ್ಮಾನಿಸಿದ್ದೇವೆ. ಜೂನ್ 11 ರಂದು ಈ ಯೋಜನೆಗೆ ಚಾಲನೆ ನೀಡಲಿದ್ದು, ಶೇ. 94 ರಷ್ಟು ಮಹಿಳಾ ಪ್ರಯಾಣಿಕರು ಯೋಜನೆಯ ಲಾಭ ಪಡೆಯಲಿದ್ದಾರೆ. ಪುರುಷ ಪ್ರಯಾಣಿಕರ ಹಿತದೃಷ್ಟಿಯಿಂದ ಬಸ್ ಗಳಲ್ಲಿ ಶೇ. 50 ರಷ್ಟು ಸೀಟುಗಳನ್ನು ಅವರಿಗಾಗಿ ಮೀಸಲಿಡಲಾಗುತ್ತದೆ. ಶಿಕ್ಷಣ, ಉದ್ಯೋಗ, ಇನ್ನಿತರೆ ಕೆಲಸ ಕಾರ್ಯಗಳು ಸೇರಿದಂತೆ ವಿವಿಧ ಜವಾಬ್ದಾರಿಗಳ ನಿರ್ವಹಣೆಗಾಗಿ ನಿತ್ಯ ಪ್ರಯಾಣ ಕೈಗೊಳ್ಳುವ ನಾಡಿನ ಮಹಿಳೆಯರ ಹಿತ ಕಾಪಾಡಲು ನಾವು ಬದ್ಧರಿದ್ದೇವೆ ಎಂದು ತಿಳಿಸಿದ್ದಾರೆ.
ಚುನಾವಣಾ ಪೂರ್ವದಲ್ಲಿ ನಾವು ನಾಡಿನ ಜನತೆಗೆ ನೀಡಿದ್ದ 5 ಗ್ಯಾರೆಂಟಿ ಯೋಜನೆಗಳಿಗೆ ಇಂದು ನಡೆದ ಸಂಪುಟ ಸಭೆಯಲ್ಲಿ ಅನುಮೋದನೆ ನೀಡುವ ಮೂಲಕ "ಕಾಂಗ್ರೆಸ್ ಪಕ್ಷ ನುಡಿದಂತೆ ನಡೆಯುವ ಪಕ್ಷ" ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದೇವೆ.
ಬೆಲೆಯೇರಿಕೆ, ನಿರುದ್ಯೋಗ, ಹಸಿವು, ಬಡತನಗಳಿಂದ ನೊಂದು ಬದುಕು ಸಾಗಿಸಲು ಹೆಣಗಾಡುತ್ತಿರುವ ಜನರ ಬದುಕಿಗೆ ನಮ್ಮ ಈ ಗ್ಯಾರೆಂಟಿ ಯೋಜನೆಗಳು ಹೊಸ ಚೈತನ್ಯ ತುಂಬಲಿದೆ ಎಂದು ಭಾವಿಸಿದ್ದೇನೆ.
ಜನರ ಬೆವರ ಗಳಿಕೆಯ ಹಣ ಜನಕಲ್ಯಾಣ ಕಾರ್ಯಗಳಿಗೆ ಮಾತ್ರ ಬಳಕೆಯಾಗಲಿ, ಹಸಿವು, ಬಡತನ, ನಿರುದ್ಯೋಗಗಳ ತಾಪ ನಾಡಿನ ಜನರಿಗೆ ತಟ್ಟದಿರಲಿ ಎಂಬುದು ನಮ್ಮ ಸದುದ್ದೇಶ.
ನಮ್ಮ ಈ 5 ಗ್ಯಾರೆಂಟಿಗಳನ್ನು ನಾಡಿನ ಜನತೆಗೆ ಅತ್ಯಂತ ಹೆಮ್ಮೆಯಿಂದ ಅರ್ಪಿಸುತ್ತಿದ್ದೇನೆ ಎಂದು ಅವರು ತಿಳಿಸಿದ್ದಾರೆ.
ಸರಕಾರದ ಪ್ರಕಟನೆಯಂತೆ ಜೂನ್ 11 ರಿಂದ
ಲೇ ರಾಜ್ಯದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದ
ಯೋಜನೆ ಶಕ್ತಿ ಆರಂಭವಾಗಲಿದೆ.
ಇದನ್ನು ಓದಿ:ನುಡಿದಂತೆ ನಡೆದ ಕಾಂಗ್ರೆಸ್ ಸರಕಾರ- ಇನ್ನು ರಾಜ್ಯದಲ್ಲಿ 200 ಯುನಿಟ್ ವರೆಗೆ ವಿದ್ಯುತ್ ಉಚಿತ