ಪ್ರೇಯಸಿಯನ್ನು ಹತ್ಯೆಗೈದು ಎಸ್ಕೇಪ್ ಆದ ಪ್ರಿಯಕರ
Wednesday, June 7, 2023
ಬೆಂಗಳೂರು: ಪ್ರಿಯಕರನೇ ತನ್ನ ಪ್ರೇಯಸಿಯನ್ನು ಹತ್ಯೆ ಮಾಡಿ ಎಸ್ಕೆಪ್ ಆಗಿರುವ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಜೀವನ್ ಭಿಮಾ ನಗರದ ಕೋಡಿಹಳ್ಳಿಯಲ್ಲಿ ನಡೆದಿದೆ.
ಹೈದರಾಬಾದ್ ಮೂಲದ ಆಕಾಂಕ್ಷಾ ಮೃತಪಟ್ಟ ಯುವತಿ. ದೆಹಲಿ ಮೂಲದ ಅರ್ಪಿತ್ ಕೊಲೆ ಆರೋಪಿ.
ಆಕಾಂಕ್ಷಾ ಹಾಗೂ ಅರ್ಪಿತ್ ಇಬ್ಬರೂ ಒಂದೇ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದರು. ಆ ಬಳಿಕ ಇಬ್ಬರೂ ಕೆಲಸ ಬದಲಾಯಿಸಿ ಬೇರೆ ಬೇರೆ ಕಡೆ ಕೆಲಸಮಾಡುತ್ತಿದ್ದರು.
ಇಬ್ಬರೂ ಜೊತೆಯಾಗಿ ವಾಸಿಸುತ್ತಿದ್ದರು. ಇತ್ತೀಚೆಗೆ ಇವರಿಬ್ಬರ ಮಧ್ಯೆ ಜಗಳ ನಡೆದಿದ್ದು, ಇಬ್ಬರೂ ಬೇರೆಯಾಗು ನಿರ್ಧಾರ ತೆಗೆದುಕೊಂಡಿದ್ದರು. ಇದಾದ ಬಳಿಕ ಸೋಮವಾರ ಇಬ್ಬರೂ ಮನೆಯಲ್ಲಿರುವಾಗ ಗಲಾಟೆ ಆರಂಭವಾಗಿದೆ. ಇದರಿಂದ ಅರ್ಪಿತ್ ಆಕೆಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.
ಯುವತಿಯನ್ನು ಕೊಲೆಗೈದ ಬಳಿಕ ಕುತ್ತಿಗೆಗೆ ಬಟ್ಟೆ ಕಟ್ಟಿ ನೇಣು ಹಾಕಿಕೊಂಡು ಸಾವನಪ್ಪಿರುವ ರೀತಿ ಬಿಂಬಿಸುವ ಯತ್ನ ಮಾಡಿದ್ದಾನೆ. ಆದರೆ ಮೃತದೇಹವನ್ನು ಫ್ಯಾನ್‌ಗೆ ಕಟ್ಟಲಾಗದೆ ನೆಲದ ಮೇಲೆ ಬಿಟ್ಟು ಮನೆಗೆ ಬೀಗ ಹಾಕಿ ಎಸ್ಕೆಪ್ ಆಗಿದ್ದಾನೆ. ರಾತ್ರಿ ಮತ್ತೋರ್ವ ರೂಮೇಟ್ ಕೆಲಸ ಮುಗಿಸಿ ಮನೆಗೆ ಬಂದಾಗ ಘಟನೆ ಬೆಳಕಿಗೆ ಬಂದಿದೆ. ಮೊದಲು ಇದೊಂದು ಅನುಮಾನಾಸ್ಪದ ಸಾವು ಎಂದುಕೊಂಡಿದ್ದ ಪೊಲೀಸರಿಗೆ ಸ್ಥಳ ಪರಿಶೀಲನೆ ಬಳಿಕ ಕೊಲೆ ಎಂಬುದು ಬೆಳಕಿಗೆ ಬಂದಿದೆ. ಸದ್ಯ ಜೀವನ್ ಭಿಮಾ ನಗರ ಪೊಲೀಸರು ಆರೋಪಿ ವಿರುದ್ಧ ಕೊಲೆ ಕೇಸ್ ದಾಖಲು ಮಾಡಿದ್ದಾರೆ. ತಲೆಮರೆಸಿಕೊಂಡಿರುವ ಅರ್ಪಿತ್‌ಗಾಗಿ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.