ಅನ್ನಭಾಗ್ಯಕ್ಕೆ ಕೇಂದ್ರ ಅಡ್ಡಗಾಲು: ಸಿದ್ದರಾಮಯ್ಯ ಆಕ್ರೋಶ
ಅನ್ನಭಾಗ್ಯಕ್ಕೆ ಕೇಂದ್ರ ಅಡ್ಡಗಾಲು: ಸಿದ್ದರಾಮಯ್ಯ ಆಕ್ರೋಶ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಅನ್ನಭಾಗ್ಯ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕಿದೆ ಎಂದು ಆಕ್ರೋಶ ಹೊರಹಾಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಈ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪ್ರತಿಭಟನಾ ಪತ್ರ ಬರೆಯುವುದಾಗಿ ಎಚ್ಚರಿಕೆ ನೀಡಿದ್ದಾರೆ.
ಅನ್ನಭಾಗ್ಯ ಯೋಜನೆಯಡಿ ಹೆಚ್ಚುವರಿ ಐದು ಕೆ.ಜಿ. ಅಕ್ಕಿ ವಿತರಣೆಗಾಗಿ2.28 ಲಕ್ಷ ಟನ್ ನೀಡಲು ಕೇಂದ್ರ ಸರ್ಕಾರ ಸ್ವಾಮ್ಯದ ಭಾರತೀಯ ಆಹಾರ ನಿಗಮ ಒಪ್ಪಿಗೆ ನೀಡಿತ್ತು. ಇದೀಗ ಅದು ಹಿಂದೇಟು ಹಾಕುತ್ತಿದೆ. ಇದು ಬಿಜೆಪಿ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಕೇಂದ್ರ ಸರ್ಕಾರ ಬಡವರ ಹೊಟ್ಟೆಗೆ ಕಲ್ಲುಹಾಕುವ ಕೆಲಸ ಮಾಡುತ್ತಿದೆ. ಬಿಜೆಪಿ ಕೀಳು ರಾಜಕೀಯ ಮಾಡುತ್ತಿದೆ. ಏಳು ಲಕ್ಷ ಟನ್ ಅಕ್ಕಿ ಇಟ್ಟುಕೊಂಡು ಕೊಡುವುದಿಲ್ಲ ಎನ್ನುತ್ತಿದ್ದಾರೆ. ಇದು ತಪ್ಪು ಎಂದು ಸಿದ್ದರಾಮಯ್ಯ ಹೇಳಿದರು.
ಅನ್ನಭಾಗ್ಯ ಯೋಜನೆಯಿಂದ ಕಾಂಗ್ರೆಸ್ ಸರ್ಕಾರಕ್ಕೆ ಉತ್ತಮ ಹೆಸರು ಬರುತ್ತಿದೆ. ಇದನ್ನು ತಪ್ಪಿಸಲು ತಿಪ್ಪರಲಾಗ ಹೊಡೆಯುತ್ತಿದ್ದಾರೆ ಎಂದು ಸಿದ್ದರಾಮಯ್ಯ ಅಸಮಾಧಾನ ತೋರಿದರು.
ವಾಗ್ದಾನದಂತೆ ನಡೆದುಕೊಳ್ಳಿ. ಕುಂಟು ನೆಪ ಬೇಡ. ಅಂಗಳ ಡೊಂಕು ಎಂದು ಕೇಂದರ ಸರ್ಕಾರದತ್ತ ಬೊಟ್ಟು ಮಾಡುವುದು ಬೇಡ ಎಂದು ಬಿಜೆಪಿ ಶಾಸಕ ಸುನೀಲ್ ಕುಮಾರ್ ಟ್ವೀಟ್ ಮಾಡಿದ್ದಾರೆ.
ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಸಿ.ಟಿ. ರವಿ ಕೂಡ ಟ್ವೀಟ್ ಮಾಡಿದ್ದು, ಅಕ್ಕಿ ಬದಲು ಬಡವರ ಬ್ಯಾಂಕ್ ಖಾತೆಗೆ ಹಣ ಹಾಕಿ ಎಂದಿದ್ದಾರೆ.
.