-->
ರೈಲು ನಿಲ್ದಾಣದಲ್ಲಿ ವಿದ್ಯುತ್ ಆಘಾತ: ಕೊಚ್ಚೆಗುಂಡಿ ತಪ್ಪಿಸಲು ಹೋಗಿ ಮಹಿಳೆ ದಾರುಣ ಸಾವು

ರೈಲು ನಿಲ್ದಾಣದಲ್ಲಿ ವಿದ್ಯುತ್ ಆಘಾತ: ಕೊಚ್ಚೆಗುಂಡಿ ತಪ್ಪಿಸಲು ಹೋಗಿ ಮಹಿಳೆ ದಾರುಣ ಸಾವು


ಹೊಸದಿಲ್ಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ನಿನ್ನೆ ರಾತ್ರಿಯಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾದ ನೀರಿನ ಕೊಚ್ಚೆಗುಂಡಿಯನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದ ಮಹಿಳೆಯೊಬ್ಬರು ವಿದ್ಯುತ್ ಆಘಾತದಿಂದ ದಾರುಣವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ.

ಪೂರ್ವ ದೆಹಲಿಯ ಪ್ರೀತ್ ವಿಹಾರ್ ನಿವಾಸಿ ಸಾಕ್ಷಿ ಅಹುಜಾ ಮೃತಪಟ್ಟವರು. ಅವರು ಇಬ್ಬರು ಮಹಿಳೆಯರು ಹಾಗೂ ಮೂವರು ಮಕ್ಕಳೊಂದಿಗೆ ಬೆಳಗ್ಗೆ 5:30 ರ ಸುಮಾರಿಗೆ ರೈಲ್ವೆ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ ಸಾಕ್ಷಿ ಅಹುಜಾ ಕೊಚ್ಚೆಗುಂಡಿಗಳನ್ನು ತಪ್ಪಿಸಲು ವಿದ್ಯುತ್ ಕಂಬವನ್ನು ಹಿಡಿದಿದ್ದಾರೆ. ಆಗ ಭಾರೀ ಪ್ರಮಾಣದ ವಿದ್ಯುತ್ ಪ್ರವಹಿಸಿ ಅವರು ಗಂಭೀರ ಸ್ಥಿತಿಗೆ ತಲುಪಿದ್ದಾರೆ.

ಆದರೂ ಅವರ ಜೀವ ಉಳಿಸುವ ಯತ್ನವಾಗಿ ಸ್ಥಳದಲ್ಲಿದ್ದವರು ಮಹಿಳೆಯನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೊಸದಿಲ್ಲಿ ರೈಲು ನಿಲ್ದಾಣದ ನಿರ್ಗಮನ ಸಂಖ್ಯೆ ಒಂದರ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ, ಸ್ಥಳಕ್ಕೆ ತಲುಪಿದಾಗ ಮಹಿಳೆ ಪ್ರಜ್ಞಾಹೀನ ಸ್ಥಿತಿಯಲ್ಲಿರುವುದು ಕಂಡುಬಂದಿದೆ. ಸಂತ್ರಸ್ತೆಯ ಸಹೋದರಿ, ಮಾಧ್ವಿ ಚೋಪ್ರಾ, ಸಂಬಂಧಪಟ್ಟ ಅಧಿಕಾರಿಗಳ ನಿರ್ಲಕ್ಷ್ಯವನ್ನು ಆರೋಪಿಸಿ ದೂರು ದಾಖಲಿಸಿದ್ದಾರೆ. ಅದರ ಆಧಾರದನ್ವಯ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದರು

Ads on article

Advertise in articles 1

advertising articles 2

Advertise under the article