-->
ಉಚಿತ ಬಸ್ ಯೋಜನೆಯ ಬೆನ್ನಿಗೆ ಮತ್ತೊಂದು ಮಹತ್ವದ ನಿರ್ಧಾರ ಮಾಡಿದ ಸಿದ್ದರಾಮಯ್ಯ

ಉಚಿತ ಬಸ್ ಯೋಜನೆಯ ಬೆನ್ನಿಗೆ ಮತ್ತೊಂದು ಮಹತ್ವದ ನಿರ್ಧಾರ ಮಾಡಿದ ಸಿದ್ದರಾಮಯ್ಯ


ಇಂದಿರಾ ಕ್ಯಾಂಟೀನ್ ಯೋಜನೆ ಪುನರ್ ಚಾಲನೆ ಹಾಗೂ ಕ್ಯಾಂಟೀನ್ ಗಳ ಸಂಖ್ಯೆ ಹೆಚ್ಚಳ ಕುರಿತಾಗಿ ಮುಖ್ಯಮಂತ್ರಿ Siddaramaiah ಅವರು ಇಂದು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು. 

ಬೆಂಗಳೂರಿನ ಪ್ರತಿ ವಾರ್ಡಿಗೆ ಒಂದರಂತೆ ಕನಿಷ್ಠ 250 ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಇಂದಿರಾ ಕ್ಯಾಂಟೀನ್ ಗಳ ಪುನರಾರಂಭಕ್ಕೆ ಸಂಬಂಧಿಸಿದಂತೆ ಚರ್ಚೆ ನಡೆಸಲಾಗಿದ್ದು, ಇಲ್ಲಿವರೆಗೂ ಇಂದಿರಾ ಕ್ಯಾಂಟಿನ್ ಗೆ ಬಿಬಿಎಂಪಿ ವತಿಯಿಂದ 70%, ಹಾಗೂ ಸರ್ಕಾರದಿಂದ ಶೇ.30 ರಷ್ಟು ವೆಚ್ಚ ಭರಿಸಲಾಗುತ್ತಿತ್ತು. ಆದರೆ ಈಗ ಬಿಬಿಎಂಪಿಯು ಶೇ. 50 ರಷ್ಟು  ಹಾಗೂ ಸರ್ಕಾರ ಶೇ. 50 ರಷ್ಟು ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ.  

ಬೆಂಗಳೂರು ಹೊರತು ಪಡಿಸಿ ರಾಜ್ಯದ ವಿವಿಧೆಡೆಗಳಲ್ಲಿ ಇಂದಿರಾ ಕ್ಯಾಂಟೀನ್ ವೆಚ್ಚದಲ್ಲಿ ಸರ್ಕಾರ ಶೇ. 70 ರಷ್ಟು ಹಾಗೂ ಸ್ಥಳೀಯ ನಗರ ಸಭೆಗಳು ಶೇ. 30 ರಷ್ಟು ಭರಿಸಬೇಕೆಂದು ತೀರ್ಮಾನಿಸಲಾಗಿದೆ. ರಾಜ್ಯದ ಯಾವೆಲ್ಲ ಸ್ಥಳಗಳಲ್ಲಿ ಹೊಸದಾಗಿ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಬೇಕೆನ್ನುವ ಸ್ಥಳಗಳ ಪಟ್ಟಿಯನ್ನು ನೀಡಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. 

ಇಂದಿರಾ ಕ್ಯಾಂಟೀನ್ ನಲ್ಲಿ ದೊರೆಯುವ ಆಹಾರದ ಕ್ರಮವನ್ನು ಬದಲಾಯಿಸುತ್ತಿದ್ದು,  ಆಹಾರದ ಗುಣಮಟ್ಟ, ಪ್ರಮಾಣ ಹಾಗೂ ಶುಚಿತ್ವ ಕಾಪಾಡಲು ಸೂಚಿಸಲಾಗಿದೆ. ದರ ಪರಿಷ್ಕರಣೆ ಇಲ್ಲ. ವಲಯವಾರು ಕರೆಯಲಾಗುವ ಟೆಂಡರ್ ಪ್ರಕ್ರಿಯೆ ನಂತರ ಇಂದಿರಾ ಕ್ಯಾಂಟೀನ್ ಯೋಜನೆಗೆ ಪುನ: ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ

Ads on article

Advertise in articles 1

advertising articles 2

Advertise under the article