
ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಫೇಸ್ ಬುಕ್ ಲೈವ್ ನಲ್ಲೇ ಆತ್ಮಹತ್ಯೆಗೆ ಶರಣಾದ ಯುವತಿ
Sunday, June 25, 2023
ಹೈದರಾಬಾದ್: ದಾಂಪತ್ಯವೆಂಬುದು ಸುಂದರ ಬಂಧ. ಆದರೆ ಈ ಸಂಬಂಧದಲ್ಲಿ ಸಣ್ಣ ಏರುಪೇರಾದೂ ಸಂಸಾರವೇ ಬೀದಿಗೆ ಬರುತ್ತದೆ. ಇದೀಗ ಪತಿಯ ಅಕ್ರಮ ಸಂಬಂಧದಿಂದ ಬೇಸತ್ತು ಯುವತಿಯೊಬ್ಬರು ಫೇಸ್‌ಬುಕ್ ಲೈವ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಆಘಾತಕಾರಿ ಘಟನೆಯೊಂದು ಹೈದರಾಬಾದ್‌ನಲ್ಲಿ ನಡೆದಿದೆ.
ಹೈದರಾಬಾದ್ ಸನಾ(32) ಮೃತಪಟ್ಟ ಮಹಿಳೆ. ಸನಾ ನನ್ನ ಪತಿಗೆ ಮಹಿಳೆಯೊಬ್ಬಳೊಂದಿಗೆ ವಿವಾಹೇತರ ಸಂಬಂಧವಿದೆ ಎಂದು ಆರೋಪಿಸಿ ಫೇಸ್‌ಬುಕ್ ಲೈವ್ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಳೆದ 5 ವರ್ಷಗಳ ಹಿಂದೆ ಸನಾ ತನ್ನ ಶಾಲಾ ಸಹಪಾಠಿ ಹೇಮಂತ್ ಎಂಬಾತನನ್ನು ಪ್ರೀತಿಸಿ ವಿವಾಹವಾಗಿದ್ದರು. ಆ ವೇಳೆ ಹೇಮಂತ್ ನಿರುದ್ಯೋಗಿಯಾಗಿದ್ದ. ಸನಾ ದೆಹಲಿಯ ಏರ್‌ಲೈನ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು. ವಿವಾಹದ ಬಳಿಕ ಹೇಮಂತ್ ಬೇರೆ ಮಹಿಳೆಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದನು. ಇದೇ ಕಾರಣದಿಂದ ಬೇಸತ್ತು ಹೋಗಿದ್ದ ಸನಾ ಫೇಸ್‌ಬುಕ್ ಲೈವ್ ನಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಈ ವೇಳೆ ಅವರು ಪತಿಯ ವಿರುದ್ಧ ಕಿರುಕುಳದ ಆರೋಪವನ್ನು ಮಾಡಿದ್ದಾರೆ. ಸನಾ ಮನೆಯವರು ಆಕೆಯ ಆತ್ಮಹತ್ಯೆಗೆ ಹೇಮಂತ್ ಕಾರಣವೆಂದು ಆರೋಪಿಸಿದ್ದಾರೆ. ಸಂತ್ರಸ್ತೆಯ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.