ಚೆಕ್ ಅಮಾನ್ಯ ಪ್ರಕರಣ: ಯೂನಿಯನ್ ಬ್ಯಾಂಕ್ ಸಿಬ್ಬಂದಿ ವಿರುದ್ಧ ಜಾಮೀನು ರಹಿತ ವಾರೆಂಟ್ !
Saturday, June 10, 2023
ಚೆಕ್ ಅಮಾನ್ಯ ಪ್ರಕರಣ: ಯೂನಿಯನ್ ಬ್ಯಾಂಕ್ ಸಿಬ್ಬಂದಿ ವಿರುದ್ಧ ಜಾಮೀನು ರಹಿತ ವಾರೆಂಟ್ !
ಚೆಕ್ ಅಮಾನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂನಿಯನ್ ಬ್ಯಾಂಕ್ ಸಿಬ್ಬಂದಿ ವಿರುದ್ಧವೇ ಜಾಮೀನು ರಹಿತ ವಾರೆಂಟ್ ಹೊರಡಿಸಿರುವ ಪ್ರಕರಣ ಮಂಗಳೂರಿನಲ್ಲಿ ನಡೆದಿದೆ.
ಎರಡು ಪ್ರತ್ಯೇಕ ಪ್ರಕರಣದಲ್ಲಿ ಮಂಗಳೂರಿನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಸಿಬ್ಬಂದಿ ಆರೋಪಿತರಾಗಿದ್ದು, ಇವರ ವಿರುದ್ಧ ಎರಡು ಪ್ರತ್ಯೇಕ ನ್ಯಾಯಾಲಯಗಳು ವಾರೆಂಟ್ ಜಾರಿಗೊಳಿಸಿವೆ.
ಸ್ಥಳೀಯ ನಿವಾಸಿಯಾಗಿರುವ ಪ್ರಭಾಕರ ಸಾಲಿಯಾನ್ ಎಂಬವರು ಎರಡೂ ಪ್ರಕರಣದ ಆರೋಪಿಯಾಗಿದ್ದಾರೆ. ಇವರು ಮಂಗಳೂರಿನ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕಾವೂರು ಶಾಖೆಯ ಸಿಬ್ಬಂದಿಯಾಗಿದ್ದಾರೆ.
ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾದ ಕಾವೂರು ಶಾಖಾ ಕಚೇರಿಯ ಸಮೀಪದಲ್ಲೇ ಪೊಲೀಸ್ ಠಾಣೆ ಇದ್ದು, ಕರ್ತವ್ಯದಲ್ಲಿ ಇರುವಾಗಲೇ ಆರೋಪಿಯನ್ನು ಬಂಧಿಸುವ ಸಾಧ್ಯತೆ ಇದೆ.