ಬೆಳ್ತಂಗಡಿ- ಉಯ್ಯಾಲೆಯಾಡುವಾಗ ಕುತ್ತಿಗೆಗೆ ಹಗ್ಗ ಸಿಲುಕಿ 14 ವರ್ಷದ ಬಾಲಕ ಸಾವು
Sunday, July 16, 2023
ಬೆಳ್ತಂಗಡಿ : ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕ ಸಾವನ್ನಪ್ಪಿದ ಘಟನೆ ದಿಡುಪೆಯಲ್ಲಿ ನಡೆದಿದೆ.
ರಜೆ ಇದ್ದ ಕಾರಣ ಮನೆಯಲ್ಲಿ ಬಾಲಕ ಆಟವಾಡುತ್ತಿದ್ದ.
ಬೆಳ್ತಂಗಡಿ ತಾಲೂಕಿನ ಮಲವಂತಿಗೆ ಗ್ರಾಮದ ಮಂಟಮೆ ನಿವಾಸಿ ಬಾಲಕೃಷ್ಣ ಎಂಬವರ ಮೊದಲ ಮಗ 8 ನೇ ತರಗತಿ ವಿದ್ಯಾರ್ಥಿ ಶ್ರೀಷಾ (14) ಸಾವನ್ನಪ್ಪಿದ ಬಾಲಕ.
ಮನೆಯ ಅಂಗಳದಲ್ಲಿ ಉಯ್ಯಾಲೆಯಲ್ಲಿ ಆಡುತ್ತಿದ್ದಾಗ ಆಕಸ್ಮಿಕವಾಗಿ ಕುತ್ತಿಗೆಗೆ ಸಿಲುಕಿ ನೆಲಕ್ಕೆ ಬಿದ್ದಿದ್ದಾನೆ. ಇದನ್ನು ಬಾಲಕನ ತಂಗಿ ನೋಡಿ ತಂದೆಗೆ ಮಾಹಿತಿ ನೀಡಿದ್ದು ಕುತ್ತಿಗೆಯಿಂದ ಹಗ್ಗ ತೆಗೆದು ತಕ್ಷಣ ಉಜಿರೆ ಖಾಸಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಬಾಲಕ ಸಾವನ್ನಪ್ಪಿದ್ದಾನೆ.
ಈ ಘಟನೆ ಜುಲೈ 16 ರಂದು ಸಂಜೆ ನಡೆದಿದೆ.
ಬಾಲಕನ ಶವ ಶವಪರೀಕ್ಷೆಗೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದ್ದು, ಘಟನೆ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ಧನರಾಜ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ಬಂದು ಪರಿಶೀಲನೆ ನಡೆಸುತ್ತಿದ್ದಾರೆ.