ಮಹಿಳೆಯರಿಗೆ 2 ಸಾವಿರ ಸಿಗುವ ಗೃಹ ಲಕ್ಷ್ಮಿ ಯೋಜನೆಗೆ ನೊಂದಾಣಿ ಹೇಗೆ? ಇಲ್ಲಿದೆ ಮಾಹಿತಿ
Sunday, July 16, 2023
ಬೆಂಗಳೂರು: ಮನೆಯೊಡತಿಗೆ 2 ಸಾವಿರ ನೀಡುವ ಗೃಹಲಕ್ಷ್ಮೀ ಯೋಜನೆ ಜುಲೈ 19 ರಂದು ಆರಂಭವಾಗಲಿದೆ. ಈ ಯೋಜನೆ ಪ್ರಯೋಜನ ಪಡೆಯಲು ನೋಂದಣಿ ಮಾಡುವುದು ಹೇಗೆ ಎಂದು ತಿಳಿದುಕೊಳ್ಳೋಣ
ಗೃಹಜ್ಯೋತಿಯಂತೆ ಸ್ವಯಂ ನೋಂದಣಿ ಮಾಡಿಕೊಳ್ಳಲು ಸಾಧ್ಯವಿ ಗ್ರಾಮೀಣ ಭಾಗದಲ್ಲಿ ಗ್ರಾಮ ಒನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ಹಾಗೂ ನಗರ ಪ್ರದೇಶದಲ್ಲಿ ಕರ್ನಾಟಕ ಒನ್ ಅಥವಾ ಬೆಂಗಳೂರು ಒನ್ ಕೇಂದ್ರದಲ್ಲಿ ನೋಂದಣಿ ಮಾಡಬಹುದು.
ಫಲಾನುಭವಿಗಳ ಹೆಸರು ನೋಂದಣಿಗೆ 'ಪ್ರಜಾ ಪ್ರತಿನಿಧಿ' ಹೆಸರಿನಲ್ಲಿ ಸ್ವಯಂ ಸೇವಕರನ್ನು ನೇಮಕ ಮಾಡಲಾಗುತ್ತಿದೆ.
ನಿಗದಿತ ಕೇಂದ್ರಗಳಲ್ಲಿ ಹೆಸರು ನೋಂದಣಿ ಮಾಡಿಸಿದಾಗ ಅಲ್ಲಿಯೇ ಮಂಜೂರಾತಿ ಪತ್ರ ನೀಡಲಾಗುತ್ತದೆ. ಪ್ರಜಾಪ್ರತಿನಿಧಿ ಮೂಲಕ ನೋಂದಾಯಿಸಿದರೆ ಮಂಜೂರಾತಿ ಪತ್ರವನ್ನು ನಂತರ ಮನೆಗೆ ತಲುಪಲಾಗುತ್ತದೆ.
ನೋಂದಣಿ ಪ್ರಕ್ರಿಯೆ ಸಂಪೂರ್ಣ ಉಚಿತವಾಗಿರುತ್ತದೆ. ನೋಂದಣಿಗೆ ಯಾವುದೇ ಗಡುವು ವಿಧಿಸಿಲ್ಲ,
ಪಡಿತರ ಚೀಟಿಗಳ ಲಭ್ಯ ಡೇಟಾ ಆಧರಿಸಿ ನೋಂದಣಿಗೆ ದಿನಾಂಕ ಹಾಗೂ ಸಮಯ ನಿಗದಿಪಡಿಸಲಾಗಿದೆ. ನೋಂದಾಯಿತ ಮೊಬೈಲ್ ಸಂಖ್ಯೆಗೆ ಆ ಕುರಿತ ಮಾಹಿತಿ ರವಾನೆಯಾಗಲಿದೆ.
ದಾಖಲೆಗಳೇನು?
ಪಡಿತರ ಚೀಟಿ ಸಂಖ್ಯೆ, ಆಧಾರ್ ಕಾರ್ಡ್ ಸಂಖ್ಯೆ ಹಾಗೂ ಬ್ಯಾಂಕ್ ಖಾತೆಯ ಪಾಸ್‌ಬುಕ್ ಮಾಹಿತಿ ನೀಡಬೇಕು. ಆಧಾರ್ ನಂಬರ್ ಜೋಡಣೆಯಾಗಿರುವ ಬ್ಯಾಂಕ್ ಖಾತೆ ಹೊರತುಪಡಿಸಿ ಬೇರೊಂದು ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ ಆಗಬೇಕಾಗಿದ್ದಲ್ಲಿ ಆ ಬ್ಯಾಂಕ್ ಖಾತೆಯ ಪಾಸ್‌ಬುಕ್ ನೀಡಬೇಕು. ಫಲಾನುಭವಿ ಹೆಸರಿನಲ್ಲಿಯೇ ಬ್ಯಾಂಕ್ ಖಾತೆ ಇರಬೇಕಾದದ್ದು ಅಗತ್ಯ. ಬ್ಯಾಂಕ್ ಖಾತೆ ಇಲ್ಲದಿದ್ದಲ್ಲಿ ಖಾತೆ ತೆರೆದ ಬಳಿಕ ನೋಂದಣಿ ಮಾಡಿಸಿಕೊಳ್ಳಬಹುದು.
ಸಹಾಯವಾಣಿ
1902 ಗೃಹಲಕ್ಷ್ಮಿ ಯೋಜನೆ ಸಲುವಾಗಿ ರೂಪಿಸಿರುವ ಸಹಾಯವಾಣಿ. ನೋಂದ ಣಿಗೆ ನಿಗದಿಪಡಿಸಿರುವ ದಿನಾಂಕ, ಸಮಯ ಮತ್ತು ಸ್ಥಳವನ್ನು ಸಹಾಯವಾಣಿಗೆ ಕರೆ ಮಾಡಿ ತಿಳಿದುಕೊಳ್ಳ ಬಹುದು. ಜತೆಗೆ, 81475 00500 ವಾಟ್ಸ್ ಆ್ಯಪ್ ಮೂಲಕವೂ ಮಾಹಿತಿ ಪಡೆಯುಬಹುದು.
ತೆರಿಗೆ ಪಾವತಿಸುವವರಿಗೆ ಇಲ್ಲ;
ಪಡಿತರ ಚೀಟಿ ಹೊಂದಿದ ಕುಟುಂಬದ ಯಜಮಾನಿ ಈ ಯೋಜನೆ ಫಲಾನುಭವಿಯಾಗಲು ಅರ್ಹರು. ಬಿಪಿಎಲ್, ಅಂತ್ಯೋದಯ ಹಾಗೂ ಎಪಿಎಲ್ ಪಡಿತರ ಚೀಟಿಯಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರಬೇಕು. ಕುಟುಂಬದ ಯಜಮಾನಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿ ಎಸ್ ಟಿ ಪಾವತಿದಾರರಾಗಿದ್ದಲ್ಲಿ ಯೋಜನೆಯಡಿ ಫಲಾನುಭವಿಯಾಗಲು ಅರ್ಹರಲ್ಲ