-->
ಭಾರಿ ಮಳೆ- ನಾಳೆ ( ಜು. 25) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ

ಭಾರಿ ಮಳೆ- ನಾಳೆ ( ಜು. 25) ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ


ಮಂಗಳೂರು: ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಭಾರಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ನಾಳೆ ( ಜುಲೈ 25) ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜು.24 ರಿಂದ 25 ರವರೆಗೆ ರೆಡ್ ಅಲರ್ಟ್ ಯೋಜನೆಯಾಗಿರುತ್ತದೆ. ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು  ಈ ನಿರ್ಣಯ ತೆಗೆದುಕೊಂಡಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಪದವಿ ಶಿಕ್ಷಣ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ನಾಳೆ ( ಜುಲೈ  25) ರಂದು ರಜೆಯನ್ನು ಘೋಷಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ವ್ಯಾಪ್ತಿಯ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜು.25 ಮಂಗಳವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ಆದೇಶಿಸಿದ್ದಾರೆ.

 ನೀರು ಇರುವ ತಗ್ಗು ಪ್ರದೇಶ,  ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸುವುದು, ಹಾಗೂ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ,   ಜಿಲ್ಲಾ ಮಟ್ಟದ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚು ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು.ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾ ಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು  ನದಿ ತೀರಕ್ಕೆ, ಸಮುದ್ರ ತೀರಕ್ಕೆ ತೆಲಳದಂತೆ ಸೂಚಿಸಲಾಗಿದೆ. ಸಂಬಂದಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ನನ್ನದ್ಧ ಸ್ಥಿತಿಯಲ್ಲಿರಿಸಿಕೊಳ್ಳುವುದು ಎಂದು ಸೂಚಿಸಲಾಗಿದೆ.

Ads on article

Advertise in articles 1

advertising articles 2

Advertise under the article