ದ.ಕ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ - ನಾಳೆ ( ಜು.7) ದ.ಕ.ಜಿಲ್ಲಾ ಶಾಲೆ ಪಿಯುಗಳಿಗೆ ರಜೆ
Thursday, July 6, 2023
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಶಾಲೆ ಮತ್ತು ಪಿಯು ತರಗತಿ ಗಳಿಗೆ ನಾಳೆ ( ಜುಲೈ 7) ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಮುನ್ಸೂಚನೆ ನೀಡಿದ್ದಾರೆ. ಮುಂದಿನಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜೊತೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಈ ಮೂಲಕ ಸೂಚನೆ ನೀಡಿದ್ದಾರೆ.
ಜಿಲ್ಲಾ ಮಟ್ಟದ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿರತಕ್ಕದ್ದು ಹಾಗೂ ವಿಪತ್ತು ನಿರ್ವಹಣೆಯನ್ನು ಚಾಚೂ ತಪ್ಪದೇ ಕಡ್ಡಾಯವಾಗಿ ನಿರ್ವಹಿಸುವುದು. ಜಿಲ್ಲಾಡಳಿತದಿಂದ ವಿವಿಧ ಪ್ರದೇಶಗಳಿಗೆ ನೇಮಿಸಲಾಗಿರುವ ನೋಡಲ್ ಅಧಿಕಾರಿಗಳು ಸದಾಜಾಗೃತರಾಗಿದ್ದು, ಸಾರ್ವಜನಿಕ ದೂರುಗಳಿಗೆ ತಕ್ಷಣ ಸ್ಪಂದಿಸುವುದು ಮತ್ತು ಜಿಲ್ಲಾಧಿಕಾರಿ ಕಛೇರಿಯ ನಿಯಂತ್ರಣ ಕೊಠಡಿಯೊಂದಿಗೆ ನಿರಂತರ ಸಂಪರ್ಕದಲ್ಲಿರುವುದು. ಪ್ರವಾಸಿಗರು , ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಸೂಚಿಸಲಾಗಿದೆ. ಸಂಬಂಧಪಟ್ಟ ಇಲಾಖಾ ಅಧಿಕಾರಿಗಳು ಪ್ರತೀ ತಾಲೂಕುಗಳಲ್ಲಿ ಕಾಳಜಿ ಕೇಂದ್ರವನ್ನು ತೆರೆದು ಸನ್ನದ್ಧಸ್ಥಿತಿಯಲ್ಲಿರಿಸಿಕೊಳ್ಳುವುದು ಪ್ರಾಕೃತಿಕ ವಿಕೋಪ ಸಂಬಂಧಿಸಿದ ಯಾವುದೇ ಸಮಸ್ಯೆಗಳಿಗೆ 1077/ 0824 2442590 ದೂರವಾಣಿಯನ್ನು ಸಂಪರ್ಕಿಸುವಂತೆ ದ.ಕ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ