-->
ಮಂಗಳೂರು: ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಗಳು ಅರೆಸ್ಟ್ - 9ಲಕ್ಷ ಮೌಲ್ಯದ ನಿಷೇಧಿತ ಎಂಡಿಎಂಎ, ಕಂಟ್ರಿ ಪಿಸ್ತೂಲ್ ವಶಕ್ಕೆ

ಮಂಗಳೂರು: ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಗಳು ಅರೆಸ್ಟ್ - 9ಲಕ್ಷ ಮೌಲ್ಯದ ನಿಷೇಧಿತ ಎಂಡಿಎಂಎ, ಕಂಟ್ರಿ ಪಿಸ್ತೂಲ್ ವಶಕ್ಕೆ

ಮಂಗಳೂರು: ಮಹತ್ವದ ಕಾರ್ಯಾಚರಣೆ ನಡೆಸಿ ಮೂವರು ಕುಖ್ಯಾತ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿರುವ ಮಂಗಳೂರು ಸಿಸಿಬಿ ಪೊಲೀಸರು 9ಲಕ್ಷ ರೂ. ಮೌಲ್ಯದ ನಿಷೇಧಿತ ಮಾದಕದ್ರವ್ಯ ಎಂಡಿಎಂಎ, ಕಂಟ್ರಿ ಪಿಸ್ತೂಲ್ ಸೇರಿ ಮಾರಕಾಯುಧಗಳನ್ನು ವಶಪಡಿಸಿಕೊಂಡಿದ್ದಾರೆ.

ಕೃಷ್ಣಾಪುರ ಏಳನೇ ಬ್ಲಾಕ್‌ ನಿವಾಸಿ ಮೊಹಮ್ಮದ್ ನಿಯಾಜ್(28), ತಲಪಾಡಿ ಕೆಸಿ ರೋಡ್ ನಿವಾಸಿ
ನಿಶಾದ್ (31), ಪಡೀಲ್ ಕಣ್ಣೂರು ನಿವಾಸಿ ಮಹಮ್ಮದ್ ರಝೀನ್(24) ಬಂಧಿತ ಆರೋಪಿಗಳು.

ಆರೋಪಿಗಳು ತಲಪಾಡಿಯ ಪಿಲಿಕೂರಿನಲ್ಲಿ ಎರಡು ಮಾರುತಿ ಸ್ವಿಪ್ಟ್ ಕಾರುಗಳಲ್ಲಿ ಮಾದಕವಸ್ತು ಎಂಡಿಎಂಎಯನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದು ಸಿಸಿಬಿ ಪೊಲೀಸ್ ದಾಳಿ ನಡೆದಿದೆ. ಈ ವೇಳೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 180 ಗ್ರಾಂ ತೂಕದ 9,00,000 ರೂ. ಮೌಲ್ಯದ ಎಂಡಿಎಂಎ ಮಾದಕವಸ್ತು, 2 ಮಾರುತಿ ಸ್ವಿಫ್ಟ್ ಕಾರುಗಳು, 1,40,000 ರೂ. ಮೌಲ್ಯದ 4 ಮೊಬೈಲ್ ಫೋನ್ ಗಳು, 22,050 ರೂ. ನಗದು, 1 ಕಂಟ್ರಿ ಪಿಸ್ತೂಲ್, ಒಂದು ಸಜೀವ ಗುಂಡು, ಎರಡು ಡ್ರ್ಯಾಗನ್ ಚೂರಿಗಳು, ಡಿಜಿಟಲ್ ತೂಕ ಮಾಪನವನ್ನು ವಶಪಡಿಸಿಕೊಳ್ಳಲಾಗಿದೆ. ವಶಪಡಿಸಿಕೊಂಡ ಸೊತ್ತುಗಳ ಒಟ್ಟು ಮೌಲ್ಯ 27,62,000 ರೂ. ಎಂದು ಅಂದಾಜಿಸಲಾಗಿದೆ. ಆರೋಪಿಗಳ ವಿರುದ್ಧ ಉಳ್ಳಾಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಪ್ರಕರಣದಲ್ಲಿ ಇನ್ನೂ ಹಲವರು ಭಾಗಿಯಾಗಿದ್ದು, ಅವರ ಪತ್ತೆ ಕಾರ್ಯ ಮುಂದುವರಿದಿದೆ.

ಆರೋಪಿಗಳ ಪೈಕಿ ಮೊಹಮ್ಮದ್ ನಿಯಾಸ್ ಎಂಬಾತನ ವಿರುದ್ಧ ಈ ಹಿಂದೆ ಉರ್ವ ಠಾಣೆಯಲ್ಲಿ ಕರ್ತವ್ಯ ನಿರತ ಎಎಸ್‌ಐಗೆ ಚೂರಿಯಿಂದ ಇರಿದು ಕೊಲೆಗೆ ಯತ್ನ, ಕೊಣಾಜ ಠಾಣೆಯಲ್ಲಿ ಕರ್ತವ್ಯ ನಿರತ ಸಿಬ್ಬಂದಿಗೆ ಹಲ್ಲೆ , ಸುರತ್ಕಲ್ ಪೊಲೀಸ್‌ ಠಾಣೆಯಲ್ಲಿ ಕೊಲೆ ಯತ್ನ ಪ್ರಕರಣ, ಸನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಪಟ್ಟ 2 ಪ್ರಕರಣ ಸೇರಿದಂತೆ ಹಲವು ಪ್ರಕರಣಗಳು ದಾಖಲಾಗಿದೆ. ಇನ್ನೋರ್ವ ಆರೋಪಿ ಮೊಹಮ್ಮದ್ ರಝೀನ್ ಮೇಲೆ ಮಾದಕ ವಸ್ತು ಮಾರಾಟ ಪ್ರಕರಣ ದಾಖಲಾಗಿರುತ್ತದೆ.



Ads on article

Advertise in articles 1

advertising articles 2

Advertise under the article