ಉಳ್ಳಾಲ: ಸಾಂಬಾರು ಚೆಲ್ಲಿತೆಂದು ಸಹಪಾಠಿಗೆ ಚೂರಿ ಎಸೆದ 9ನೇ ತರಗತಿಯ ವಿದ್ಯಾರ್ಥಿ
Thursday, July 20, 2023
ಬಟ್ಟೆಗೆ ಸಾಂಬಾರು ಚೆಲ್ಲಿದ ಕಾರಣಕ್ಕೆ ಉಳ್ಳಾಲದ ನರಿಂಗಾನ ಗ್ರಾಮದ ಮೊಂಟೆಪದವು ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಒಂಬತ್ತನೇ ತರಗತಿಯ ಇಬ್ಬರು ವಿದ್ಯಾರ್ಥಿಗಳ ಮಧ್ಯೆ ಸಣ್ಣ ವಿವಾದ ತಾರಕಕ್ಕೇರಿ ಒಬ್ಬ ವಿದ್ಯಾರ್ಥಿ ಮತ್ತೊಬ್ಬ ವಿದ್ಯಾರ್ಥಿಗೆ ಚೂರಿ ಎಸೆದು ಗಾಯಗೊಳಿಸಿದ ಘಟನೆ ನಡೆದಿದೆ.
ಮಧ್ಯಾಹ್ನ ಊಟದ ಹೊತ್ತಿನಲ್ಲಿ ಒಬ್ಬ ವಿದ್ಯಾರ್ಥಿಯ ತಟ್ಟೆಯಿಂದ ಸಾಂಬಾರು ಚೆಲ್ಲಿದ್ದಕ್ಕೆ ಪ್ರತಿಯಾಗಿ ಬಟ್ಟೆಯಲ್ಲಿ ಕಲೆ ಆಯಿತೆಂದು ಕೆರಳಿದ ವಿದ್ಯಾರ್ಥಿ ಸಾಂಬಾರು ಚೆಲ್ಲಿದ ವಿದ್ಯಾರ್ಥಿಗೆ ಕಪಾಳ ಮೋಕ್ಷ ಮಾಡಿದ್ದನು. ಕಪಾಳಮೋಕ್ಷ ಮಾಡಿದ ವಿದ್ಯಾರ್ಥಿ ಅಲ್ಲಿಂದ ಮುಂದೆ ಹೋಗುತ್ತಿರುವಾಗ ಪೆಟ್ಟು ತಿಂದ ವಿದ್ಯಾರ್ಥಿ ಬ್ಯಾಗ್ ನಿಂದ ಚೂರಿ ತೆಗೆದು ಆತನ ಮೇಲೆ ನೇರವಾಗಿ ಎಸೆದಿದ್ದಾನೆ. ಅದೃಷ್ಟವಶಾತ್ ಎದೆ ಭಾಗದಿಂದ ಸ್ವಲ್ಪ ಪಕ್ಕದಲ್ಲಿ ಚೂರಿ ತಗುಲಿದ್ದು ಗಾಯಗೊಂಡ ವಿದ್ಯಾರ್ಥಿಯನ್ನು ತಕ್ಷಣ ಉಪ ಪ್ರಾಂಶುಪಾಲರು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಒಂಬತ್ತನೆಯ ತರಗತಿ ವಿದ್ಯಾರ್ಥಿ ಚೂರಿ ಬಸ್ ಸ್ಟಾಂಡ್ ನಲ್ಲಿ ಬಿದ್ದು ಸಿಕ್ಕಿದ್ದು ಎಂದು ತಿಳಿಸಿದ್ದಾನೆ.