ಪುತ್ತೂರಿನಲ್ಲಿ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ- ಆರೋಪಿ ಬಂಧನ
Thursday, July 20, 2023
ಪುತ್ತೂರು: ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿಯರ ಜತೆ ಅಸಭ್ಯವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಪುತ್ತೂರು ಪೊಲೀಸರು ಪೋಕ್ಸೋ ಪ್ರಕರಣ ದಡಿ ಬಂಧಿಸಿದ್ದಾರೆ.
ಕಡಬ ತಾಲೂಕಿನ ಬೆಳಂದೂರಿನ ಪ್ರವೀಣ್ ಯಾನೆ ಸೀತಾರಾಮ ಬಂಧಿತ ಆರೋಪಿ.
ಪ್ರವೀಣ್ ಯಾನೆ ಸೀತಾರಾಮನ ವಿರುದ್ಧ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಈತ ಮಂಗಳವಾರ ಬೆಳಿಗ್ಗೆ ವಿದ್ಯಾರ್ಥಿನಿಯರಿಬ್ಬರು ಕಾಲೇಜಿಗೆ ತೆರಳುತ್ತಿದ್ದ ವೇಳೆ ಅಸಭ್ಯವಾಗಿ ವರ್ತಿಸಿದ್ದನು.
ವಿದ್ಯಾರ್ಥಿನಿಯರು ಆತನಿಂದ ತಪ್ಪಿಸಿಕೊಂಡು ಕಾಲೇಜಿಗೆ ಹೋಗಿ ಘಟನೆಯ ಕುರಿತು ಉಪನ್ಯಾಸಕಿಗೆ ತಿಳಿಸಿದ್ದರು. ಈ ಹಿನ್ನೆಲೆಯಲ್ಲಿ ಕಾಲೇಜಿನ ಉಪನ್ಯಾಸಕಿ ಪುತ್ತೂರು ನಗರ ಠಾಣೆಯಲ್ಲಿ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.