ಆದಿವಾಸಿ ಯುವಕನ ಮುಖದ ಮೇಲೆ ಮೂತ್ರ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್
Wednesday, July 5, 2023
ಉತ್ತರಪ್ರದೇಶ: ಬುಡಕಟ್ಟು ಜನಾಂಗದ ಯುವಕನೋರ್ವನ ಮುಖಕ್ಕೆ ಬಿಜೆಪಿ ಮುಖಂಡನೋರ್ವನು ಮೂತ್ರ ವಿಸರ್ಜನೆ ಮಾಡಿರುವ ಹೇಯ ಘಟನೆಯ ವೀಡಿಯೋ ವೈರಲ್ ಆದ ಬೆನ್ನಲ್ಲೇ ಮಧ್ಯಪ್ರದೇಶ ಪೊಲೀಸರು ಆರೋಪಿ ಪ್ರವೇಶ್ ಶುಕ್ಲಾ ಎಂಬಾತನನ್ನು ಬಂಧಿಸಿದ್ದಾರೆ.
ಮಧ್ಯಪ್ರದೇಶದ ಕುಬ್ರಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಆರೋಪಿ ಪ್ರವೇಶ್ ಶುಕ್ಲಾ ಕುಬ್ರಿ ಗ್ರಾಮದ ನಿವಾಸಿ. ಈತ ಎಸಗಿರುವ ಕೃತ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಆರೋಪಿ ಪ್ರವೇಶ್ ಶುಕ್ಲಾನನ್ನು ವಿಚಾರಣೆ ನಡೆಸಲಾಗುತ್ತಿದ್ದು, ಶೀಘ್ರದಲ್ಲಿಯೇ ಆತನ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಅಂಜುಲತಾ ಪಟ್ಲಿ ತಿಳಿಸಿದ್ದಾರೆ. ಇದೀಗ ಆರೋಪಿಯ ವಿರುದ್ಧ ಐಪಿಸಿ ಸೆಕ್ಷನ್ 294, 504, ಎಸ್ಸಿ, ಎಸ್‌ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬುಡಕಟ್ಟು ಯುವಕನ ಮೇಲೆ ಮೂತ್ರ ಮಾಡಿರುವ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಹೇಳಿದ್ದಾರೆ. ರಾಜ್ಯ ಸರ್ಕಾರ ಆರೋಪಿಯನ್ನು ಬಿಡುವುದಿಲ್ಲ ಮತ್ತು ಅವರಿಗೆ ಶಿಕ್ಷೆ ನೀಡುವುದು ಎಲ್ಲರಿಗೂ ಪಾಠವಾಗಿತ್ತದೆ ಎಂದು ಸಿಎಂ ಚೌಹಾಣ್ ಹೇಳಿದರು.
ಆರೋಪಿಯು ಮದಗಯಸೇವನೆ ಮಾಡಿ ಆದಿವಾಸಿ ಯುವಕನ ಮುಖದ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾನೆ ಎಂದು ವರದಿಯಾಗಿದೆ. ಈ ಘಟನೆ ನಾಚಿಕೆಗೇಡಿನ ಸಂಗತಿಯಾಗಿದ್ದು, ಆರೋಪಿಗಳ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಧ್ಯಪ್ರದೇಶ ಗೃಹ ಸಚಿವ ನರೋತ್ತಮ್ ಮಿಶ್ರಾ ಹೇಳಿದ್ದಾರೆ.