ಮಂಗಳೂರಿನಲ್ಲಿ BEACH ಗೆ ಹೋದ ಯುವತಿಯ ಮೇಲೆ ನೈತಿಕ ಪೊಲೀಸ್ ಗಿರಿ- ಕೇರಳ ಸ್ಟೋರಿ ನೋಡಿಯೂ ಬುದ್ದಿ ಬರಲಿಲ್ಲ...ಎಂದು ಹಲ್ಲೆ
Saturday, July 22, 2023
ಮಂಗಳೂರು: ಪಣಂಬೂರು ಬೀಚ್ ಗೆ ತೆರಳಿದ್ದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿನಿ ಯೊಬ್ಬರಿಗೆ ಯುವಕರ ಗುಂಪೊಂದು ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿ ನೈತಿಕ ಪೊಲೀಸ್ ಗಿರಿ ಮೆರೆದ ಘಟನೆ ನಡೆದಿದೆ.
ಮಂಗಳೂರಿನಲ್ಲಿ ಆ್ಯಂಟಿ ಕಮ್ಯೂನಲ್ ವಿಂಗ್ ಆರಂಭವಾದ ನಂತರ ನಡೆದ ಮೊದಲ ನೈತಿಕ ಪೊಲೀಸ್ ಗಿರಿ ಇದಾಗಿದೆ.
ಮಂಗಳೂರಿನ ಮೆಡಿಕಲ್ ಕಾಲೇಜೊಂದರ 6 ವಿದ್ಯಾರ್ಥಿಗಳು ಶುಕ್ರವಾರ ಸಂಜೆ 5.30ರ ಸುಮಾರಿಗೆ ಪಣಂಬೂರು ಸಮುದ್ರ ಕಿನಾರೆ ಗೆ ಹೋಗಿದ್ದಾರೆ. ಯುವಕರು ಬೈಕ್ ನಲ್ಲಿ ಬಂದಿದ್ದರು ಮತ್ತು ಯುವತಿಯರು ಬಸ್ ನಲ್ಲಿ ಬಂದಿದ್ದರು.
ಇವರು BEACH ನಲ್ಲಿದ್ದ ವೇಳೆ ಇಬ್ಬರು ಅಪರಿಚಿತರು ಇವರ ಚಲನವಲನಗಳನ್ನು ಗಮನಿಸುತ್ತ, ಮೊಬೈಲ್ ಫೋನ್ ಗಳಲ್ಲಿ ವಿಡಿಯೊ ಮಾಡಿದ್ದಾರೆ. ವಿದ್ಯಾರ್ಥಿಗಳು ಇದನ್ನು ಗಮನಿಸಿದರೂ ಅದನ್ನು ಪ್ರಶ್ನಿಸದೆ ತಮ್ಮ ಪಾಡಿಗೆ ತಾವು ಇದ್ದು ಹೋಗಿದ್ದಾರೆ. ನಂತರ ಯುವಕರು ಬೈಕ್ ನಲ್ಲಿ, ಯುವತಿಯರು ಬಸ್ ನಲ್ಲಿ ಹಿಂದಿರುಗಿದ್ದಾರೆ.
ನಾಲ್ವರು ವಿದ್ಯಾರ್ಥಿನಿಯರ ಪೈಕಿ ಓರ್ವ ಯುವತಿ ನಗರದ ಚಿಲಿಂಬಿಯಲ್ಲಿ ಬಸ್ ನಿಂದ ಇಳಿದು ತನ್ನ PG ಕಡೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಪಣಂಬೂರು ಬೀಚ್ ನಲ್ಲಿ ಹಿಂಬಾಲಿಸುತ್ತಿದ್ದ ಅದೇ ಅಪರಿಚಿತರ ಗುಂಪು ಹಿಂಬಾಲಿಸಿಕೊಂಡು ಬಂದು ಯುವತಿಗೆ ಬೆದರಿಸಿದ್ದಾರೆ. ಯುವತಿಗೆ 'ಕೇರಳ ಸ್ಟೋರಿ' ನೋಡಿಯೂ ನಿಮಗೆ ಬುದ್ದಿ ಬರುವುದಿಲ್ಲಾ ಎಂದು ಅವಾಚ್ಯ ಪದಗಳಿಂದ ಬೈದು ಹಲ್ಲೆ ನಡೆಸಿದ್ದಾರೆ. ಈ ಸಂಬಂಧ ವಿದ್ಯಾರ್ಥಿನಿಯರು ಉರ್ವ ಸ್ಟೋರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.