-->
ಮಂಗಳೂರು: ನೈತಿಕ ಪೊಲೀಸ್ ಗಿರಿ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು

ಮಂಗಳೂರು: ನೈತಿಕ ಪೊಲೀಸ್ ಗಿರಿ ಮೂವರು ಬಜರಂಗದಳ ಕಾರ್ಯಕರ್ತರಿಗೆ ಗಡಿಪಾರು


ಮಂಗಳೂರು: ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಭಾಗಿಯಾಗಿರುವ ಮೂವರು ಬಜರಂಗದಳ ಕಾರ್ಯಕರ್ತರಿಗೆ ಮಂಗಳೂರು ಪೊಲೀಸರು ನೋಟಿಸ್ ಜಾರಿಗೊಳಿಸಿ ತನ್ಮನ್ನು ಯಾಕೆ ಗಡೀಪಾರು ಮಾಡಬಾರದೆಂದು ಪ್ರಶ್ನಿಸಿದ್ದಾರೆ.

ಇತ್ತೀಚೆಗೆ ನಗರದ ಮರೋಳಿಯಲ್ಲಿ ನಡೆದ ಹೋಲಿ ಆಚರಣೆಯ ವೇಳೆ ನಡೆದ ನೈತಿಕ ಪೊಲೀಸ್ ಗಿರಿ ಪ್ರಕರಣ ಹಾಗೂ ಸುಲ್ತಾನ್ ಜ್ಯುವೆಲ್ಲರಿಗೆ ನುಗ್ಗಿ ಸಿಬ್ಬಂದಿಗೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಬಾಲಚಂದ್ರ ಅತ್ತಾವರ, ಗಣೇಶ್ ಅತ್ತಾವರ ಮತ್ತು ಜಯಪ್ರಕಾಶ್ ಶಕ್ತಿನಗರ ಇವರು ಮೂವರ ವಿರುದ್ಧ ಗಡಿಪಾರು ನೋಟಿಸ್ ಜಾರಿಗೊಳಿಸಿದ್ದಾರೆ‌. ಅವರಿಗೆ ಜುಲೈ  21ರಂದು ಅಥವಾ ಅದರೊಳಗೆ ಬಂದು ಡಿಸಿಪಿ ಅಂಶುಕುಮಾರ್ ಮುಂದೆ ಹಾಜರಾಗಬೇಕು. ಅಲ್ಲದೆ ಲಿಖಿತ ಸ್ಪಷ್ಟನೆ ನೀಡುವಂತೆ ನೊಟೀಸ್ ನಲ್ಲಿ ಆದೇಶಿಸಲಾಗಿದೆ.

ಈ ಬಗ್ಗೆ ಮಂಗಳೂರು ಪೊಲೀಸ್ ಕಮಿಷನರ್ ಕುಲದೀಪ್ ಜೈನ್ ಮಾತನಾಡಿ, ಪದೇಪದೇ ಕ್ರೈಂ ಮಾಡಿದವರ ಮೇಲೆ ಕ್ರಮ ತೆಗೆದುಕೊಳ್ಳುವ ಕೆಲಸವಾಗುತ್ತಿದೆ. ಅವರು ನಮಗೆ ಆರೋಪಿಗಳಷ್ಟೇ, ಅವರು ಯಾವ ಸಂಘಟನೆ ಅನ್ನೋದು ನಮಗೆ ಬೇಡ. ಮೂವರು ಮಾತ್ರ ಅಲ್ಲ, 60 ಮಂದಿಗೆ ನೋಟೀಸ್ ಜಾರಿಗೊಳಿಸಲಾಗಿದೆ. ನೈತಿಕ ಪೊಲೀಸ್ ಗಿರಿ ಸಂಬಂಧಿಸಿ ಮೂವರ ಮೇಲೆ ಠಾಣೆಯಿಂದ ಪ್ರಸ್ತಾವನೆ ಬಂದಿದೆ. ಅವರನ್ನು ಗಡೀಪಾರು ಮಾಡಲು ಠಾಣಾಧಿಕಾರಿಗಳು ಪ್ರಸ್ತಾವನೆ ಸಲ್ಲಿಸಿದ್ದರು. ಹೀಗಾಗಿ ಅವರಿಗೆ ನೋಟೀಸ್ ಮಾಡಿದ್ದೇವೆ, ಗಡಿಪಾರು ಪ್ರಕ್ರಿಯೆ ಆಗಲಿದೆ ಎಂದರು.


ಪೊಲೀಸರ ಸ್ಪಷ್ಡನೆ


ಈ ದಿನ ಸುದ್ದಿ ಮಾದ್ಯಮಗಳಲ್ಲಿ ಬಾಲಚಂದ್ರ, ಗಣೇಶ್ ಅತ್ತಾವರ ಮತ್ತು ಜಯಪ್ರಶಾಂತ್ ರವರನ್ನು ಗಡಿಪಾರು ಮಾಡುವ ಬಗ್ಗೆ ನೊಟೀಸ್ ನೀಡಿದ್ದು, ಈ ಬಗ್ಗೆ ಕಾನೂನು ಹೊರಾಟ ನಡೆಸುವುದಾಗಿ ಹೇಳಿಕೆ ನೀಡಿರುವುದಾಗಿ ವರದಿಯಾಗಿರುತ್ತದೆ. ಈ ಬಗ್ಗೆ ಈ ಕೆಳಗಿನಂತೆ ಸ್ಪಷ್ಟನೆಯನ್ನು ನೀಡಲಾಗಿದೆ.

ಬಾಲಚಂದ್ರ ಮತ್ತು ಗಣೇಶ್ ಅತ್ತಾವರ ರವರ ತಲಾ ಮೇಲೆ 5 ಪ್ರಕರಣಗಳು ಮತ್ತು ಜಯಪ್ರಶಾಂತ್ ಈತನ ಮೇಲೆ 7 ಪ್ರಕರಣಗಳು ದಾಖಲಾಗಿದ್ದು, ಇವರುಗಳು ಅಪರಾಧ ಚಟುವಟಕೆಗಳಲ್ಲಿ ಭಾಗಿಯಾಗಿರುವುದರಿಂದ ಯಾವುದೇ ಅಪರಾಧ ಚಟುವಟಕೆಗಳಲ್ಲಿ ಭಾಗಿಯಾಗದಂತೆ ಷರತ್ತು ಬದ್ಧ ಮುಚ್ಚಳಕೆ ಪಡೆದುಕೊಂಡಿದ್ದರೂ ಇವರುಗಳು ಮುಚ್ಚಳಿಕೆ ಅವಧಿಯಲ್ಲರುವಾಗ ಎರಡು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗಿ ಮುಚ್ಚಳಿಕೆ ಷರತ್ತುಗಳನ್ನು ಉಲ್ಲಂಘಿಸಿರುವುದರಿಂದ ಇವರುಗಳ ಮುಚ್ಚಳಕೆಯನ್ನು ಮುಟ್ಟುಗೋಲು ಹಾಕಿಕೊಂಡು ಇವರುಗಳಿಗೆ ದಂಡ ವಿಧಿಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗಿರುತ್ತದೆ. ಇವರುಗಳು ಪುನಃ ಇದೇ ರೀತಿ ಅಪರಾಧ ಕೃತ್ಯಗಳನ್ನು ನಡೆಸಿ ಸಾರ್ವಜನಿಕ ಶಾಂತಿ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಸಾದ್ಯತೆ ಬಗ್ಗೆ ಸಾಕಾಷ್ಟು ಗುಪ್ತ ಮಾಹಿತಿ ಲಭ್ಯವಾಗಿರುವುದರಿಂದ ಮುಂಜಾಗ್ರತ ಕ್ರಮಕ್ಕಾಗಿ ಇವರುಗಳನ್ನು ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಿಂದ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವಂತೆ ಸಂಬಂಧಪಟ್ಟ ಪೊಲೀಸ್ ಠಾಣಾಧಿಕಾರಿಯವರು ವರದಿ ಸಲ್ಲಿಸಿದ್ದು, ಅದರಂತೆ ಇವರುಗಳ ಮೇಲೆ ಕಾನೂನು ಚಾಲ್ತಿಯಲ್ಲಿರುತ್ತದೆ. ಪ್ರಕ್ರಿಯೆ

ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿರುವ ರೌಡಿ ಅಸಾಮಿಗಳನ್ನು ಗುರುತಿಸಿ ಈಗಾಗಲೇ ಒಟ್ಟು 62 ರೌಡಿ ಅಸಾಮಿಗಳನ್ನು ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳಿಗೆ ಗಡಿಪಾರು ಮಾಡಿ ಅದೇಶ ಹೊರಡಿಸಲಾಗಿದೆ ಅಲ್ಲದೆ ಪ್ರಸ್ತುತ ವರ್ಷದಲ್ಲಿ 987 ವ್ಯಕ್ತಿಗಳಿಂದ ಯಾವುದೇ ಅಪರಾಧ ಕೃತ್ಯುಗಳಲ್ಲಿ ಭಾಗಿಯಾಗದಂತೆ ದಂಡ ಪ್ರಕ್ರಿಯೆ ಸಂಹಿತೆಯನ್ವಯ ಷರತ್ತು ಬದ್ಧ ಮುಚ್ಚಳಕೆಯನ್ನು ಪಡೆದುಕೊಳ್ಳಲಾಗಿದೆ. ಅಲ್ಲದೆ ಮುಚ್ಚಳಕೆಯ ಷರತ್ತುಗಳನ್ನು ಉಲ್ಲಂಘಿಸಿದವರ ವಿರುದ್ಧ ಪ್ರಸ್ತುತ ವರ್ಷದಲ್ಲಿ 12 ಜನರ ಮುಚ್ಚಳಿಕೆಯನ್ನು ಮುಟ್ಟುಗೋಲು ಹಾಕಿಕೊಂಡು ದಂಡದ ಜೊತೆಗೆ ನ್ಯಾಯಾಂಗ ಬಂಧನವನ್ನೂ ವಿಧಿಸಲಾಗಿರುತ್ತದೆ. ಹಾಗೂ ಪದೇ ಪದೇ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಾ ಮುಂಜಾಗ್ರತ ಕ್ರಮಗಳನ್ನು ಪಾಲಿಸದ ರೌಡಿ ಅಸಾಮಿಗಳ ವಿರುದ್ಧ ಕಠಿಣ ಕ್ರಮ ಜರುಗಿಸುವ ಉದ್ದೇಶದಿಂದ ಗಡಿಪಾರು/ಗೂಂಡಾ ಕಾಯ್ದೆಯನ್ನ ಕ್ರಮ ಕೈಗೊಳ್ಳಲಾಗುತ್ತಿದೆ. ಈ ಕಾನೂನು ಕ್ರಮಗಳ ಪ್ರಕ್ರಿಯೆಯಲ್ಲಿ ಆರೋಪಿಗಳ ಅಪರಾಧ ಹಿನ್ನಲೆ ಮತ್ತು ಚಟುವಟಿಕೆಯನ್ನು ಮಾತ್ರ ಪರಿಗಣಿಸುತ್ತಿದೆ. ಹೊರತುಪಡಿಸಿ ಯಾವುದೇ ಧರ್ಮ, ಜಾತಿ, ಸಂಘಟನೆ ಅಥವಾ ಪಕ್ಷ ಆಧಾರಿತವಾಗಿ ಕ್ರಮ ಕೈಗೊಳ್ಳುತ್ತಿಲ್ಲ. ಈ ಕಾನೂನು ಪ್ರಕ್ರಿಯೆಯು ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯ ಸದುದ್ದೇಶದಿಂದ ನಡೆಸಲಾಗುತ್ತಿದೆ. ಯಾರು ಕಾನೂನು ಬಾಹಿರ ಚಟುವಟಿಕೆಗಳನ್ನು ಮುಂದುವರಿಸುತ್ತಾರೊ ಅವರ ವಿರುದ್ಧ ಈ ಕಾನೂನು ಪ್ರಕ್ರಿಯೆಯು ನಿರಂತರವಾಗಿ ಮುಂದುವರಿಯತ್ತದೆ.

Ads on article

Advertise in articles 1

advertising articles 2

Advertise under the article