ಕಟ್ಟಡಗಳಿಗೆ ಅಗ್ನಿಶಾಮಕ ಇಲಾಖೆ ಎನ್‌ಓಸಿ: ಕಾಯ್ದೆಗೆ ಮಹತ್ವದ ತಿದ್ದುಪಡಿ!
Tuesday, July 18, 2023
ಕಟ್ಟಡಗಳಿಗೆ ಅಗ್ನಿಶಾಮಕ ಇಲಾಖೆ ಎನ್‌ಓಸಿ: ಕಾಯ್ದೆಗೆ ಮಹತ್ವದ ತಿದ್ದುಪಡಿ!
ಬೃಹತ್ ಕಟ್ಟಡಗಳಿಗೆ ಅಗ್ನಿ ಶಾಮಕ ದಳದ ನಿರಪೇಕ್ಷಣಾ ಪತ್ರ(NOC) ಪಡೆಯಲು ಕಾಯ್ದೆಗೆ ತಿದ್ದುಪಡಿ ತರಲಾಗಿದೆ. ರಾಜ್ಯ ವಿಧಾನಸಭೆಯಲ್ಲಿ ಕರ್ನಾಟಕ ಅಗ್ನಿಶಾಮಕ ದಳ ಮಸೂದೆ 2023ಕ್ಕೆ ಅನುಮೋದನೆ ನೀಡಲಾಗಿದೆ.
ಕಟ್ಟಡಗಳಿಗೆ ಅಗ್ನಿ ಶಾಮಕ ದಳ ಮತ್ತು ತುರ್ತು ಸೇವೆಗಳ ಇಲಾಖೆಯಿಂದ ನಿರಪೇಕ್ಷಣಾ ಪತ್ರವನ್ನು ಪಡೆಯಲು ಇದ್ದ ನಿಯಮವನ್ನು ಸಡಿಲಿಕೆ ಮಾಡಲಾಗಿದೆ. ಕಟ್ಟಡಗಳ ಎತ್ತರವನ್ನು 15 ಮೀಟರ್‌ನಿಂದ 21 ಮೀಟರ್‌ಗೆ ಎತ್ತರಿಸುವ ಉದ್ದೇಶದೊಂದಿಗೆ ತಿದ್ದುಪಡಿ ಮಾಡಿ ಈ ಮಸೂದೆಯನ್ನು ಮಂಡಿಸಲಾಗಿದೆ.
ಈ ತಿದ್ದುಪಡಿಗೆ ಹಿಂದಿನ ಸರ್ಕಾರ ಮಾರ್ಚ್ 24ರಂದು ಸುಗ್ರೀವಾಜ್ಞೆ ಹೊರಡಿಸಿತ್ತು. ಹೊಸ ಕಾಯ್ದೆ ಜಾರಿಯಾದ ನಂತರ 21 ಮೀಟರ್‌ಗಿಂತ ಹೆಚ್ಚು ಎತ್ತರ ಇರುವ ಕಟ್ಟಡಗಳು ಅಗ್ನಿಶಾಮಕ ದಳದಿಂದ ನಿರಪೇಕ್ಷಣಾ ಪತ್ರ ಪಡೆಯುವುದು ಕಡ್ಡಾಯವಾಗಿದೆ.
ಈಗ ರಾಜ್ಯದಲ್ಲಿ 19294 ಪ್ರಕರಣಗಳಲ್ಲಿ 15924 ಪ್ರಕರಣಗಳಲ್ಲಿ ಕಟ್ಟಡಗಳು ನಿಯಮ ಮೀರಿವೆ.