ಪುತ್ರಿಯನ್ನು ಪ್ರೀತಿಸುತ್ತಿದ್ದ ಯುವಕನಿಗೆ ಚೂರಿಯಿಂದ ಇರಿದ ತಂದೆ
Monday, July 17, 2023
ಧಾರವಾಡ: ಪುತ್ರಿಯನ್ನು ಪ್ರೀತಿಸುತ್ತಿದ್ದಾನೆಂದು ಕೋಪದಿಂದ ತಂದೆಯೊಬ್ಬ ಆಕೆಯ ಪ್ರಿಯಕರನಿಗೆ ಚಾಕುವಿನಿಂದ ಇರಿದ ಘಟನೆ ಧಾರವಾಡ ಜಿಲ್ಲೆಯಲ್ಲಿ ನಡೆದಿದೆ.
ಚಾಕು ಇರಿತಕ್ಕೆ ಒಳಗಾಗಿರುವ ಶಶಾಂಕ್ ಮೂಗನ್ನವರ ಎಂಬ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆಂದು ದಾಖಲಿಸಲಾಗಿದೆ.
ಈ ಘಟನೆ ಧಾರವಾಡ ಜಿಲ್ಲೆ ಉಪನಗರ ಪೊಲೀಸ್ ಠಾಣೆ ವ್ಯಾಪ್ತಿಯ ಸೈದಾಪುರದಲ್ಲಿ ನಡೆದಿದೆ. ಶಶಾಂಕ್ ಮೂಗನ್ನವರ ಪ್ರೀತಿಸುತ್ತಿದ್ದ ಯುವತಿಯ ತಂದೆ ಹುಲಗಪ್ಪ ಬಡಿಗೇರ ಎಂಬಾತ ಯುವಕನಿಗೆ ಚಾಕುವಿನಿಂದ ಇರಿದು ಪರಾರಿಯಾಗಿದ್ದಾನೆ. ಸ್ಥಳಕ್ಕೆ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಪತ್ತೆ ಹಚ್ಚುವ ಕಾರ್ಯದಲ್ಲಿ ತೊಡಗಿದ್ದಾರೆ.