ಮಂಗಳೂರು: ನಿರಂತರ ಮಳೆ - ದ.ಕ.ಜಿಲ್ಲಾ ಶಾಲಾ, ಕಾಲೇಜುಗಳಿಗೆ ನಾಳೆಯೂ ರಜೆ
Tuesday, July 4, 2023
ಮಂಗಳೂರು: ದ.ಕ.ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆ ಸುರಿಯುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ಜುಲೈ 4 ರಿಂದ 5 ರವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಆದ್ದರಿಂದ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ದ.ಕ.ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ದ.ಕ.ಜಿಲ್ಲಾಧಿಕಾರಿ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ, ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾಸಂಸ್ಥೆಗಳಿಗೆ ರಜೆ ಘೋಷಿಸಿದ್ದಾರೆ. ಅಲ್ಲದೆ ನೀರು ಇರುವ ತಗ್ಗು ಪ್ರದೇಶ, ಕೆರೆ, ನದಿ ತೀರ ಸಮುದ್ರ ತೀರಕ್ಕೆ ಮಕ್ಕಳು ಹೋಗದಂತೆ ಪಾಲಕರು ಜಾಗ್ರತೆ ವಹಿಸಲು ಮುನ್ಸೂಚನೆ ನೀಡಿದ್ದಾರೆ.
ಅಲ್ಲದೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು. ಜೊತೆಗೆ ಪ್ರವಾಸಿಗರು ಹಾಗೂ ಸಾರ್ವಜನಿಕರು ನದಿತೀರಕ್ಕೆ, ಸಮುದ್ರತೀರಕ್ಕೆ ತೆರಳದಂತೆ ಈ ಮೂಲಕ ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಸೂಚನೆ ನೀಡಿದ್ದಾರೆ.